ನಂಜನಗೂಡು: ಅಂಬೇಡ್ಕರ್ ಅವರ ನಾಮಫಲಕಕ್ಕೆ ಮಣ್ಣು ಬಳಿದು ಅಪಮಾನ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕಳೆದ ಕೆಲವು ತಿಂಗಳ ಹಿಂದಷ್ಟೇ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿತ್ತು. ಅಪಾರ ಹಾನಿ ಉಂಟಾಗಿತ್ತು. ರಾತ್ರಿಯ ಸಮಯದಲ್ಲಿ ಕಿಡಿಗೇಡಿಗಳಿಂದ ಕೃತ್ಯ ನಡೆದಿದೆ.
ನಾಮಫಲಕಕ್ಕೆ ಮಣ್ಣು ಬಳಿದು ಅಂಬೇಡ್ಕರ್ ರವರ ಭಾವಚಿತ್ರವಿರುವ ಸ್ಟಿಕರ್ ಹರಿದು ಕಿಡಿಗೇಡಿಗಳು ಅಪಮಾನ ಮಾಡಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಗ್ರಾಮಸ್ಥರ ಪ್ರತಿಭಟನೆ ನಡೆಸಿದರು. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

