ಮೈಸೂರು: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಬಿಜೆಪಿ ಚಾಣಕ್ಯ ಅಮಿತ್ ಶಾ ಮೈಸೂರು ಭೇಟಿ ಕೈಗೊಳ್ಳಲಿದ್ದಾರೆ. ಫೆ.೧೦ರ ರಾತ್ರಿ ಕೇಂದ್ರ ಸಚಿವರು ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್ಗೆ ತೆರಳುತ್ತಾರೆ.
ಫೆ.11 ಬೆಳಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ಸುತ್ತೂರು ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ಜಾತ್ರೆಯ ಹೆಸರಿನಲ್ಲಿ ರಾಜ್ಯ ಬಿಜೆಪಿ ಮುಖಂಡರ ಜೊತೆ ಚರ್ಚೆ ನಡೆಸಿ ಚುನಾವಣಾ ತಂತ್ರ ಹೆಣೆಯುವ ಯೋಜನೆ ಇರುವ ಬಗ್ಗೆ ಸುದ್ದಿಗಳು ಹರಿಡಾದುತ್ತಿವೆ.