Bengaluru 28°C

ಹುರ ಗ್ರಾಮದಲ್ಲಿ ಅಮಿತ್ ಶಾ ಪ್ರತಿಕೃತಿ ದಹನ: ಪ್ರತಿಭಟನೆ ಮಾಡಿ ಬಾರಿ ಆಕ್ರೋಶ

ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾರ್ಲಿಮೆಂಟ್ ಸದಸ್ವತ್ವವನ್ನು ವಜಾ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ನಂಜನಗೂಡು : ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾರ್ಲಿಮೆಂಟ್ ಸದಸ್ವತ್ವವನ್ನು ವಜಾ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡಿ ಪ್ರತಿ ಕೃತಿ ದಹಿಸಿದ ಆಕ್ರೋಶ ವ್ಯಕ್ತಪಡಿಸಲಾಯಿತು.


ನಂಜನಗೂಡು ತಾಲ್ಲೂಕಿನ ಹುರ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಲಾಯಿತು. ಹುರ ಗ್ರಾಮದ ಅಂಬೇಡ್ಕರ್ ವೃತ್ತದ ಬಳಿ ಜಮಾವಣೆ ಗೊಂಡ ಗ್ರಾಮಸ್ಥರು, ಅಮಿತ್ ಷಾ ಪ್ರತಿಕೃತಿ ದಯಿಸಿ ದಿಕ್ಕಾರ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.


ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ರಕ್ಷಣಾಮಂತ್ರಿಯಾಗಿ ಎಲ್ಲಾ ಜನರಿಗೂ ರಕ್ಷಣೆ ನೀಡುವ ಜವಾಬ್ದಾರಿ ಸ್ಥಾನದಲ್ಲಿದ್ದುಕೊಂಡು, ಅಂಬೇಡ್ಕರ್ ಅವರ ಹೆಸರನ್ನು ಪದೇಪದೇ ಬಳಸುವುದು ಕೆಲವರಿಗೆ ಶೋಕಿಯಾಗಿದೆ. ಅಂಬೇಡ್ಕರ್ ಅವರ ಹೆಸರನ್ನು ಬಳಸಿದಷ್ಟು ದೇವರ ಹೆಸರನ್ನು ಬಳಸಿದ್ದರೆ ಇಷ್ಟೊತ್ತಿಗೆ ಏಳು ಜನ್ಮದವರಿಗೆ ಸ್ವರ್ಗ ಸಿಗುತ್ತಿತ್ತು ಎಂದು ಹೇಳಿಕೆ ನೀಡುವ ಮೂಲಕ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನಿಸಲಾಗಿದೆ.


ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ಗೃಹ ಸಚಿವರಾಗಿದ್ದಾರೆ ಎಂಬುದನ್ನು ಅವರು ಮರೆತಿರುವಂತಿದೆ. ಅಂಬೇಡ್ಕರ್ ಅವರ ಚಿಂತನೆ ನಮಗೆ ದಾರಿದೀಪ, ದೇಶದ ಮಹಿಳೆಯರು, ಶೋಷಿತರು, ಅಸ್ಪೃಶ್ಯರನ್ನು ರಕ್ಷಣೆ ಮಾಡುತ್ತಿರುವ ಏಕೈಕ ಶಕ್ತಿ ಎಂದರೆ ಅದು ಅಂಬೇಡ್ಕರ್ ರವರ ಮತ್ತು ಅವರ ಸಂವಿಧಾನ ಮಾತ್ರ.


ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಹಾಗೂ ನೀವು ಇಲ್ಲಿಯ ತನಕ ಸುರಕ್ಷಿತವಾಗಿದ್ಫಿರ ಎಂದರೆ ಅಂಬೇಡ್ಕರ್ ರವರ ಸಂವಿಧಾನದಿಂದ ಮಾತ್ರ ಇಲ್ಲ ಎಂದರೆ ನಿಮ್ಮ ಸುರಕ್ಷತೆ ಹೇಗಿರುತ್ತಿತ್ತು ಎಂಬುದನ್ನು ಊಹಿಸಲಿಕ್ಕು ಆಗುತ್ತಿರಲಿಲ್ಲ.


ಆದ್ದರಿಂದ ಈ ಕೂಡಲೇ ಅವರು ಕ್ಷಮೆ ಯಾಚಿಸಬೇಕು ಅಲ್ಲದೆ ಅವರನ್ನು ಸಂಪುಟದಿಂದ ವಜಾಗೊಳಿಸಿ ಆತನನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ನೇತೃತ್ವದಲ್ಲಿ ದಫೆದರ್ ದೊಡ್ಡಯ್ಯ ಹಾಗೂ ಸಿಬ್ಬಂದಿಗಳು ಹೆಚ್ಚಿನ ಬಂದೋಬಸ್ತು ನೀಡಿ ಶಾಂತಿಯುತ ಪ್ರತಿಭಟನೆಗೆ ಮುಂದಾದರು


ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೆ .ಮಾರುತಿ, ನಾಗೇಶ್ ರಾಜ್, ಹುರ ಗ್ರಾಮದ ಶಶಿಧರ್ ,ಕಂದೇಗಾಲ ಗಂಗಾಧರ್ ಶಿವಣ್ಣ, ಬಸವರಾಜು ಚಿಕ್ಕಸಿದ್ದು, ಸುರೇಶ್ ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರು ಮತ್ತು ಸಂಘಟಕರು ಭಾಗವಹಿಸಿದ್ದರು.


Nk Channel Final 21 09 2023