ನಂಜನಗೂಡು: ಭಾರತ ತಂಡದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಕುಟುಂಬ ಸಮೇತ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿರುವ ಶ್ರೀ ಲಕ್ಷ್ಮಿಕಾಂತ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಶ್ರೀ ಲಕ್ಷ್ಮೀ ಕಾಂತ ಸ್ವಾಮಿಗೆ ಪೂಜೆ ಸಲ್ಲಿಸಿ ದೇವಾಲಯವನ್ನು ಪ್ರದಕ್ಷಿಣೆ ಹಾಕಿ ಭಕ್ತಿ ಭಾವ ಮೆರೆದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರನ್ನು ಕಾಣಬಹುದು.

