ಮೈಸೂರು : ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಮೈಸೂರಿನಲ್ಲಿ ಮತ್ತೊಂದು ಬಲಿಯಾಗಿರುವ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ. ಜಯರಾಮು (55) ಕಿರುಕುಳಕ್ಕೆ ಬಲಿಯಾದ ವ್ಯಕ್ತಿ. ಇಕ್ವಿಟಾಸ್, ಜನಬ್ಯಾಂಕ್ ಮೈಕ್ರೋ ಫೈನಾನ್ಸ್ ನಲ್ಲಿ ಸುಮಾರು 5 ಲಕ್ಷ ರೈತ ಸಾಲ ಪಡೆದಿದ್ದನು.
ಇಬ್ಬರು ಹೆಣ್ಣು ಮಕ್ಕಳನ್ನ ಜಯರಾಮು ಮದುವೆ ಮಾಡಿದ್ದನು. ಎರಡು ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದರು. ಮಕ್ಕಳ ಮದುವೆ ಹಾಗೂ ಕೃಷಿಗೆ ಮೈಕ್ರೋಫೈನಾನ್ಸ್ ನಿಂದ ಸಾಲ ಪಡೆದಿದ್ದರು.
ಇತ್ತೀಚೆಗೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ, ಸಾಲ ತೀರಿಸಲಾಗದೆ ಆತ್ಮಹತ್ಯೆ ಶರಣಾಗಿದ್ದಾರೆ. ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಜಯರಾಮು ಶರಣಾಗಿದ್ದಾರೆ. ಹೆಚ್‌ಡಿ ಕೋಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.