Bengaluru 27°C

ಮೈಕ್ರೋ ಫೈನಾನ್ಸ್‌ಗೆ ಮತ್ತೊಂದು ಬಲಿ

ಮೈಕ್ರೋ ಫೈನಾನ್ಸ್‌ ಸಾಲಕ್ಕೆ ಹೆದರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಶೀಲ (53) ಆತ್ಮಹತ್ಯೆ ಮಾಡಿಕೊಂಡವರು.

ನಂಜನಗೂಡು: ಮೈಕ್ರೋ ಫೈನಾನ್ಸ್‌ ಸಾಲಕ್ಕೆ ಹೆದರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಶೀಲ (53) ಆತ್ಮಹತ್ಯೆ ಮಾಡಿಕೊಂಡವರು. ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಗಳಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಣೆಗೆ ಸುಮಾರು 5 ಲಕ್ಷ ರೂ. ಸಾಲ ಪಡೆದಿದ್ದರು ಎನ್ನಲಾಗಿದೆ.


ಪ್ರತಿ ತಿಂಗಳು 20 ಸಾವಿರ ರೂ.ಗೂ ಹೆಚ್ಚು ಕಂತು ಕಟ್ಟಬೇಕಾಗಿತ್ತು. ಸಾಲದ ಮೇಲೆ ಖರೀದಿಸಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಜೀವನ ನಿರ್ವಹಣೆ ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಇದರಿಂದ ಖಿನ್ನಗೊಂಡು ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಒದ್ದಾಡುತ್ತಿದ್ದರು.


ಇದನ್ನು ಕಂಡ ಸ್ಥಳೀಯರು ಕುಟುಂಬಸ್ಥರಿಗೆ ಮಾಹಿತಿ ನೀಡುವಷ್ಟರಲ್ಲಿ ಜಯಶೀಲ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೈಕ್ರೋ ಫೈನಾನ್ಸ್ ಕಾಟಕ್ಕೆ ಬೇಸತ್ತು ಮಹಿಳೆ ಸಾವನ್ನಪ್ಪಿದ್ದಾರೆ ಎಂದು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Nk Channel Final 21 09 2023