ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಜಂಟಿ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ” ಯಡಿಯಲ್ಲಿ ಯುವ ಸಮಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಯುವ ಸಮಾಲೋಚಕರಾಗಿ ಕಾರ್ಯ ನಿರ್ವಹಿಸಲು ಎಂ.ಎಸ್.ಸಿ (ಮನೋವಿಜ್ಞಾನ) ಅಥವಾ ಎಂ.ಎಸ್.ಡಬ್ಲ್ಯೂ (ಸಾಮಾಜಿಕ ಕಾರ್ಯ) ಅಥವಾ ಯಾವುದೇ ಪದವಿ ಹಾಗೂ ಯುವ ಪರಿವರ್ತಕರಿಗೆ ಯಾವುದೇ ಪದವಿಯಲ್ಲಿ ಕಡ್ಡಾಯವಾಗಿ ತೇರ್ಗಡೆ ಆಗಿರಬೇಕು.
ಅಭ್ಯರ್ಥಿಗಳು 35 ವರ್ಷದೊಳಗಿರಬೇಕು, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು, ಪಿರಿಯಾಪಟ್ಟಣ, ಹುಣಸೂರು, ಕೆ.ಆರ್.ನಗರ, ಎಚ್.ಡಿ ಕೋಟೆ, ನಂಜನಗೂಡು ಮತ್ತು ಟಿ.ನರಸೀಪುರ ತಾಲೂಕಿನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು (ಸಂದರ್ಭ ಬಂದರೆ ಉಳಿದ ತಾಲೂಕಿನ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು).
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳನ್ನು ಮತ್ತು ಅಂಕಪಟ್ಟಿಗಳನ್ನು ಚಾಮುಂಡಿ ವಿಹಾರ ಕ್ರೀಡಾಂಗಣದ ಯುವ ಸ್ಪಂದನ ಕೇಂದ್ರಕ್ಕೆ ಜನವರಿ 06 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯ ನೋಟಿಸ್ ಬೋರ್ಡ್ ಅಥವಾ ದೂ.ಸಂ: 0821-2564179 ಹಾಗೂ ಯುವ ಸ್ಪಂದನ ಕೇಂದ್ರದ ಕ್ಷೇತ್ರ ಸಂಪರ್ಕ ಅಧಿಕಾರಿಗಳಾದ ಆನಂದ್ ಬಿ.ಸಿ ಅವರ ದೂ. ಸಂ:9632104204 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಭಾಸ್ಕರ್ ನಾಯಕ್ ತಿಳಿಸಿದ್ದಾರೆ.

