ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ 8 ಮಂದಿಯನ್ನು ಬಂಧಿಸಿ, ಇಬ್ಬರು ಯುವತಿಯರ ರಕ್ಷಣೆ ಮಾಡಲಾಗಿದೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 6 ಮಂದಿ ಪುರುಷರು, ದಂಧೆ ನಡೆಸುತ್ತಿದ್ದ ಇಬ್ಬರ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು.

ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಕೊಪ್ಪಲು ಗ್ರಾಮದಲ್ಲಿ ಖಚಿತ ಮಾಹಿತಿ ಪಡೆದು ಪೊಲೀಸರಿಗೆ ಒಡನಾಡಿ ಸೇವಾ ಸಂಸ್ಥೆ ಮಾಹಿತಿ ತಿಳಿಸಿದೆ. ಸೈಬರ್ ಕ್ರೈಮ್ ಇನ್ಸ್ಪೆಕ್ಟರ್ ಸುನಿಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬಂಧಿತರು ಪೋಲಿಸರ ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆಯಲ್ಲಿ ಒಡನಾಡಿ ಸಂಸ್ಥೆ ನಿರ್ದೇಶಕರಾದ ಸ್ಟ್ಯಾನ್ಲಿ ಪರುಶು ಭಾಗಿಯಾಗಿದ್ದರು.

