Bengaluru 21°C
Ad

ತೃತೀಯ ರಂಗ ಸ್ಥಾಪನೆಗೆ ಯತ್ನ: ಮಾಜಿ ಸಚಿವ ಸಿ.ಎಂ.ಇಬ್ರಾಹಿಂ

ಜೆಡಿಎಸ್‌ನಲ್ಲಿ ನೊಂದಿರುವ ಶಾಸಕರನ್ನು ಒಗ್ಗೂಡಿಸಲು ಯತ್ನಿಸುತ್ತಿದ್ದೇನೆ. ಹೊಸ ಪಕ್ಷವೋ, ತೃತೀಯ ರಂಗವೋ ಅಥವಾ ಜೆಡಿಎಸ್ ಬಲವರ್ಧನೆಯೋ ಎಲ್ಲವನ್ನೂ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಆಧರಿಸಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ತಿಳಿಸಿದರು.

ಮೈಸೂರು: ಜೆಡಿಎಸ್‌ನಲ್ಲಿ ನೊಂದಿರುವ ಶಾಸಕರನ್ನು ಒಗ್ಗೂಡಿಸಲು ಯತ್ನಿಸುತ್ತಿದ್ದೇನೆ. ಹೊಸ ಪಕ್ಷವೋ, ತೃತೀಯ ರಂಗವೋ ಅಥವಾ ಜೆಡಿಎಸ್ ಬಲವರ್ಧನೆಯೋ ಎಲ್ಲವನ್ನೂ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಆಧರಿಸಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ತಿಳಿಸಿದರು.

Ad

ಜಿ.ಟಿ.ದೇವೇಗೌಡ ಅವರನ್ನು ಭೇಟಿಯಾದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿ.ಟಿ.ದೇವೇಗೌಡ ಸೇರಿದಂತೆ ಜೆಡಿಎಸ್‌ನ ೧೨ರಿಂದ ೧೩ ಶಾಸಕರು ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಯ ವಿಚಾರದಲ್ಲಿ ಬೇಸರಗೊಂಡಿದ್ದಾರೆ. ನೋವು ನುಂಗಿಕೊಂಡಿದ್ದಾರೆ. ಈಗ ಅವರೆನ್ನಲ್ಲಾ ಒಗ್ಗೂಡಿಸುವ ಕೆಲಸವನ್ನು ನಾನು ಶುರು ಮಾಡಿದ್ದೇನೆ. ಮುಂದೆ ಏನೇನು ಆಗುತ್ತದೆಯೋ ನೋಡೋಣ ಎಂದು ಹೇಳಿದರು.

Ad

ಈಗಲೂ ನಾನೇ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ. ನಮ್ಮ ಶಾಸಕರ ನೋವು ನಿವಾರಿಸುವ ಜವಾಬ್ದಾರಿ ನನ್ನದು. ಜಿಟಿಡಿ ಕಳೆದ ವಿಧಾನಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್‌ಗೆ ಹೋಗಿದ್ದರೆ ಸಚಿವರಾಗುತ್ತಿದ್ದರು. ಜೆಡಿಎಸ್ ಬಲಪಡಿಸಲೆಂದು ನಾನೇ ಅವರನ್ನು ಜೆಡಿಎಸ್‌ನಲ್ಲಿ ಉಳಿಸಿಕೊಂಡೆ. ಈಗ ಜಿಟಿಡಿಯವರ ಕತ್ತು ಕೊಯ್ಯುವ ಕೆಲಸ ಮಾಡಲಾಗುತ್ತಿದೆ. ಎಲ್ಲಾ ವಿಚಾರಗಳ ಬಗ್ಗೆ ಅವರೊಂದಿಗೆ ಚರ್ಚಿಸಿದ್ದೇನೆ ಎಂದರು.

Ad

ಇನ್ನೆರಡು ದಿನ ಬಿಟ್ಟು ನಾನು ರಾಜ್ಯ ಪ್ರವಾಸ ಹೋಗುತ್ತಿದ್ದೇನೆ. ಆಗ ಕೆಲವು ನಾಯಕರನ್ನು ಭೇಟಿಯಾಗುತ್ತೇನೆ. ಬಳಿಕ ಮತ್ತೆ ಜಿಟಿಡಿ ಭೇಟಿಯಾಗುತ್ತೇನೆ. ಮೂಲ ಜೆಡಿಎಸ್ ನಮ್ಮದೆ. ಅದರ ಖಾತೆ, ಪಹಣಿ ಎಲ್ಲವೂ ನಮ್ಮ ಹೆಸರಿನಲ್ಲಿವೆ. ಈಗಲೂ ಎಚ್.ಡಿ.ದೇವೇಗೌಡರು ಬಿಜೆಪಿ ಸಹವಾಸ ಬಿಟ್ಟು ಬರಲಿ. ಪಕ್ಷವನ್ನು ಕಟ್ಟುತ್ತೇವೆ ಎಂದು ಹೇಳಿದರು.

Ad
Ad
Ad
Nk Channel Final 21 09 2023