ಮದ್ದೂರು: ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಯುವಕರು ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಸ್ ನಿಲ್ದಾಣದ ಬಳಿ ನಿಂತಿದ್ದ ಮಹಿಳೆಯ ಸರ ಕಸಿದು ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಳಾಸ ಕೇಳುವ ನೆಪದಲ್ಲಿ ಮಹಿಳೆ ಬಳಿ ಬಂದು ಸರ ಕಸಿದು ಪರಾರಿಗೆ ಯತ್ನಿಸಿದ್ದಾರೆ.

ಈ ವೇಳೆ ಮಹಿಳೆಯ ಚೀರಾಟ ಕೇಳಿ ಸ್ಥಳದಲ್ಲಿದ್ದ ಸಾರ್ವಜನಿಕರು ಸರಗಳ್ಳರನ್ನ ಹಿಡಿದಿದ್ದಾರೆ.ಸರಗಳ್ಳರನ್ನು ಬೆಸಗರಹಳ್ಳಿ ಪೊಲೀಸರ ವಶಕ್ಕೆ ನೀಡಲಾಗಿದೆ. ಸರಗಳ್ಳತನಕ್ಕೆ ಯತ್ನಿಸಿದ ಮಾಹಿತಿ ತಿಳಿದು ಸ್ಥಳಕ್ಕೆ ಎಸ್ಪಿ ಡಾ.ವಿ.ಜೆ.ಶೋಭಾರಾಣಿ ಭೇಟಿ ನೀಡಿ ಮಹಿಳೆಯಿಂದ ಮಾಹಿತಿ ಪೆಡೆದಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.