ತಿ. ನರಸೀಪುರ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಜಾತ ಕಾರ್ಯಕ್ರಮ ನಡೆಯಿತು. ತಾಲೂಕು ಕಾನೂನು ಸೇವಾ ಸಮಿತಿ,ವಕೀಲರ ಸಂಘ, ಕಾರ್ಮಿಕ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಸಚಿನ್ ಎಚ್.ಆರ್, ಸಿವಿಲ್ ನ್ಯಾಯಾಧೀಶರು ಜಾಥ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳಿಂದ ಜಾಗೃತಿ ಜಾತದ ಮೆರವಣಿಗೆ ನಡೆಸಲಾಯಿತು.

ಈ ಸಂದರ್ಭ ಸಿಡಿಪಿಓ ಗೋವಿಂದರಾಜು, ವಕೀಲರ ಸಂಘದ ತಾಲೂಕು ಅಧ್ಯಕ್ಷ ಮಹದೇವಸ್ವಾಮಿ,ಬಿ.ಇ.ಓ ಶಿವಮೂರ್ತಿ, ದೈಹಿಕ ಶಿಕ್ಷಣ ಪರೀಕ್ಷಕ ಮರಿಸ್ವಾಮಿ, ಬಿಸಿ ಊಟ ಸಹಾಯಕ ನಿರ್ದೇಶಕ ಪುಟ್ಟಸ್ವಾಮಿ, ಬಿ ಆರ್ ಸಿ ನಾಗೇಶ್, ಸಹಾಯಕ ಪೊಲೀಸ್ ಉಪನಿರೀಕ್ಷಕ ಚಂದ್ರಪ್ಪ, ಸರ್ಕಾರಿ ನೌಕರ ಸಂಘದ ನಿರ್ದೇಶಕ ಪುಟ್ಟರಾಜು, ಮುಖ್ಯ ಶಿಕ್ಷಕಿ ಸಾವಿತ್ರಿ, ಶಿಕ್ಷಕರುಗಳಾದ ಮಾದೇವಸ್ವಾಮಿ, ಜೆಸ್ಟಿನ್, ಮಾದಪ್ಪ ಇದ್ದರು.