ನಂಜನಗೂಡು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) -2026ರ ಹಿನ್ನೆಲೆ ನಂಜನಗೂಡು ತಾಲ್ಲೂಕು ಪಂಚಾಯಿತಿ ವತಿಯಿಂದ ದಕ್ಷಿಣಕಾಶಿ ಎಂದೇ ಪ್ರಸಿದ್ದವಾಗಿರುವ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಜಾಗೃತಿ ಮೂಡಿಸಲಾಯಿತು.

ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಶುಕ್ರವಾರ ಎಸ್.ಐ.ಆರ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು, ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಬಿ.ಎಲ್ ಒ ಫೆಸಿಲಿಟೇಷನ್ ಸೆಂಟರ್ ಹಾಗೂ ವೋಟರ್ ಫೆಸಿಲಿಟೇಷನ್ ಸೆಂಟರ್ ತೆರಯಲಾಗಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಮತದಾರರು ಇದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಮತದಾರರ ಪಟ್ಟಿ ಶುದ್ದೀಕರಣದ ಉದ್ದೇಶದಿಂದ ನಡೆಯುತ್ತಿರುವ ಮತದಾರರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಂಪೂರ್ಣ ನೀಡುವಂತೆ ಕರೆ ನೀಡಲಾಯಿತು. ಈ ವೇಳೆ ತಾಲ್ಲೂಕು ಪಂಚಾಯಿತಿಯ ತಾಲ್ಲೂಕು ಯೋಜನಾಧಿಕಾರಿ ಶ್ವೇತಾ, ಸಹಾಯಕ ನಿರ್ದೇಶಕರಾದ ಜ್ಯೋತಿ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳಾದ ದಿನೇಶ್, ಕಾವ್ಯ, ನವೀನ್ ಹಾಜರಿದ್ದರು.