ನಂಜನಗೂಡು: ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಮಟೆ ಬಾರಿಸುವ ಮೂಲಕ ಸಮೀಕ್ಷೆಗೆ ಗ್ರಾಪಂ ಅಧ್ಯಕ್ಷ ರಂಗಸ್ವಾಮಿ ಚಾಲನೆ ನೀಡಿದರು.
ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರು,ಜಿ ಮಾರಳ್ಳಿ. ಬಿಳುಗಲಿ ಈ ಗ್ರಾಮಗಳಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಗ್ರಾಪಂ ಅಧ್ಯಕ್ಷ ರಂಗಸ್ವಾಮಿ ಮಾತನಾಡಿ , ಗ್ರಾಮಗಳಲ್ಲಿ ಪರಿಶಿಷ್ಟ ಜಾತಿಯ ಸಮೀಕ್ಷೆ ನಡೆಸಲಾಗುತ್ತಿದೆ. ತಮ್ಮ ಮನೆಗಳಲ್ಲಿರುವ ಕುಟುಂಬಸ್ಥರ ಮಾಹಿತಿಯನ್ನು ನೀಡುವಂತೆ ಮನವಿ ಮಾಡಿದರು.

