ನಂಜನಗೂಡು : ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾಯಾವತಿ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಥಿಕ ಸಹಯೋಗ ದೀವಸ್ ವನ್ನು ಪಕ್ಷದವತಿಯಿಂದ ನಡೆಯುವ ಕಾರ್ಯಕ್ರಮದ ಬಗ್ಗೆ ಚಾಲನೆ ನೀಡುವ ಹಿನ್ನೆಲೆಯಲ್ಲಿ ನಂಜನಗೂಡಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರು ಬೆಂಬಲಿಗರಿಂದ ಆರ್ಥಿಕ ಸಂಪನ್ಮೂಲ ಕ್ರೋಡಿಕರಣದ ಬಗ್ಗೆ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತಾಡಿದವರು ಮೈಸೂರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳಾದ ಚಿರತೆ, ಹುಲಿಗಳ ಹಾವಳಿಯಿಂದ ಹೆಚ್ಚಾಗಿದ್ದು ಮೂರ್ನಾಲ್ಕು ಜನ ಪ್ರಾಣ ಕಳೆದುಕೊಂಡಿದ್ದಾರೆ.
ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡಿದ್ದಾರೆ ಪ್ರಾಣವನ್ನು ಉಳಿಸಬಹುದಾಗಿತ್ತು. ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತ ಸಕಾಲದಲ್ಲಿ ರಕ್ಷಣೆ ಕೊಡುವಲ್ಲಿ ವಿಫಲವಾಗಿದೆ. ಮಾನ್ಯ ಮುಖ್ಯಮಂತ್ರಿಗಳು ತವರು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದು.
ಕಾನೂನು ಸವ್ಯವಸ್ಥೆ ಹದಗೆಟ್ಟಿದೆ ಇನ್ನಾದರೂ ರಾಜ್ಯ ಸರ್ಕಾರ ಜನರ ಪ್ರಾಣ ಮತ್ತು ಆಸ್ತಿಗೆ ಗ್ಯಾರಂಟಿ ನೀಡಬೇಕೆಂದು. ಬಿ.ಎಸ್.ಪಿಯ ರಾಜ್ಯಾಧ್ಯಕ್ಷ ಮಂಡ್ಯ ಕೃಷ್ಣಮೂರ್ತಿ ಒತ್ತಾಯಿಸಿದರು.

