ಮೈಸೂರು : ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಸಾಕು ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ಗಳಿಗೆ ಅವಕಾಶ ನೀಡಬಾರದು ಎಂದು ಅರಣ್ಯ ಸಚಿವ ಈಶ್ವ್ ಖಂಡ್ರೆ ಅವರು ಖಡಕ್ ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿ ದಸರಾ ಆನೆಗಳ ನಡುವಿನ ಕದಾಟದ ನಂತರ ಸಚಿವ ಈಶ್ವರ್ ಖಂಡ್ರೆ ಅವರು, ಯಾವುದೇ ಕಾರಣಕ್ಕೂ ಸಾರ್ವಜನಿಕರು ಆನೆಗಳ ಬಳಿ ದಂತ ಹಿಡಿದುಕೊಂಡು ಫೋಟೋ ಶೂಟ್ ಮಾಡಿಸುವುದು, ವಿಡಿಯೋ ಮಾಡುವುದು, ಸೆಲ್ಫೀ ಕ್ಲಿಕ್ಕಿಸುವುದು ಹಾಗೂ ರೀಲ್ಸ್‌ಗೆ ಮುಂದಾಗುವಂತಹ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.