ಮೈಸೂರು: ಜ.7 ರಂದು ಮೈಸೂರಿನಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಬಂದ್ ಗೆ ಕರೆ ನೀಡಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಜ.07 ರಂದು ಬಂದ್ ಮಾಡಿ ಪ್ರತಿಭಟನೆ ನಡೆಯಲಿದೆ.
ಡಾ.ಬಿ.ಆರ್ ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ಮೈಸೂರು ವತಿಯಿಂದ ಬಂದ್ ನಡೆಯಲಿದ್ದು, ಸಾಮಾಜಿಕ ಜಾಲತಾಣದಲ್ಲಿ ಕರಪತ್ರ ಮತ್ತು ಪೋಸ್ಟರ್ ವೈರಲ್ ಆಗಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆಯ ತನಕ ಮೈಸೂರು ಬಂದ್ ಆಗಲಿದೆ. ಮೈಸೂರು ಬಂದ್ ಯಶಸ್ವಿಗೊಳಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಲಾಗಿದೆ.