ಚಿಕ್ಕೋಡಿ: ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಯತ್ನಾಳ ಉಚ್ಚಾಟನೆ ಖಂಡಿಸಿ ಹಿಂದೂಪರ ಸಂಘಟನೆ ಹಾಗೂ ಪಂಚಮಸಾಲಿ ಸಮುದಾಯದ ಜನರಿಂದ ಪ್ರತಿಭಟನೆ ನಡೆಸಲಾಗಿದೆ.
ಮುಗಳಖೋಡ ಪಟ್ಟಣದಲ್ಲಿ ಬಿಜೆಪಿ, ಪಂಚಮಸಾಲಿ ಮುಖಂಡರಿಂದ ಪ್ರತಿಭಟನೆ ನಡೆದಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ಜತ್ತ- ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಜನರು ಪ್ರತಿಭಟನೆ ನಡೆಸಿದ್ದಾರೆ.
ಯತ್ನಾಳ ಭಾವಚಿತ್ರ ಹಿಡಿದು ಹಿಂದೂಪರ ಕಾರ್ಯಕರ್ತರು ಪ್ರತಿಭಟಿಸಿದ್ದು, ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಭಾವಚಿತ್ರಗಳಿಗೆ ಚಪ್ಪಲಿಯಿಂದ ಹೊಡೆದು ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದರು. ಕೂಡಲೇ ಬಿಜೆಪಿ ಯತ್ನಾಳ ಅವರನ್ನು ಗೌರವದಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾದರು.

