News Karnataka Kannada
Thursday, May 02 2024
ಮೈಸೂರು

ನಂಜನಗೂಡಿನಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಆಚರಣೆ

Basava Jayanthi celebrations in Nanjangud
Photo Credit : News Kannada

ನಂಜನಗೂಡು: ಬಸವ ಜಯಂತಿಯನ್ನು ಅದ್ಧೂರಿಯಾಗಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಂಜನಗೂಡು ನಗರದ ದೇವಿರಮ್ಮನಹಳ್ಳಿ ಗೇಟ್ ನಲ್ಲಿ ಬೆಳ್ಳಿ ರಥದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಬಸವ ಬಳಗದ ಒಕ್ಕೂಟದ ಪದಾಧಿಕಾರಿಗಳು ಚಾಲನೆ ನೀಡಿದರು.

ನಗರದ ರಾಷ್ಟ್ರಪತಿ ರಸ್ತೆ, ಮಹಾತ್ಮ ಗಾಂಧಿ ರಸ್ತೆ, ಹುಲ್ಲಹಳ್ಳಿ ವೃತ್ತ , ಮೈಸೂರು ಊಟಿ ರಸ್ತೆಯ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ವೀರಗಾಸೆ, ಕರಡಿ ಮಜಲು, ನಂದಿಕೋಲ ಕುಣಿತ ಹಾಗೂ ವಿವಿಧ ವಾದ್ಯ ಮೇಳಗಳು ಭಾಗವಹಿಸಿ ಮೆರುಗು ತುಂಬಿದವು. ಶರಣರ ರೂಪಕಗಳನ್ನೊಳಗೊಂಡ ಸ್ತಬ್ಧಚಿತ್ರ ಮೆರವಣಿಗೆ ಗಮನ ಸೆಳೆಯಿತು. ಬಸವ ಜಯ ಘೋಷ, ವಚನಗಳ ಘೋಷಣೆಗಳು, ಭಜನೆಯ ಗೀತೆಗಳು ಮೊಳಗಿದವು.

ಅನುರಾಗ ಮಕ್ಕಳ ಮನೆಯ ಅಧ್ಯಕ್ಷ ಸೋಮಶೇಖರ್ ಮೂರ್ತಿ ಮಾತನಾಡಿ,ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸರಳವಾಗಿ ಬಸವ ಜಯಂತಿಯನ್ನು ಆಚರಣೆ ಮಾಡುತ್ತಿದ್ದೇವೆ. ನಂಜನಗೂಡಿನ 20 ಸಂಘಟನೆಗಳಿಂದ ಬಸವ ಬಳಗ ಒಕ್ಕೂಟದಿಂದ ಆಚರಣೆ ಮಾಡುತ್ತಿದ್ದೇವೆ. ಮಹಾ ಮಾನವತವಾದಿ ಬಸವಣ್ಣನವರ ತತ್ವ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಮೂಡನಂಬಿಕೆಯ ವಿರುದ್ಧ ಜನರು ಹೊರಬಂದಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು. ನಂಜನಗೂಡು ಬಸವ ಬಳಗದ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು