ನಂಜನಗೂಡು: ಭಾರತೀಯ ಜನತಾ ಪಕ್ಷ ನಂಜನಗೂಡು. ಮೈಸೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ ನಂಜನಗೂಡು ನಗರದ ಯಾತ್ರಿ ಭವನದಲ್ಲಿ ಅಂಬೇಡ್ಕರ್ ರವರ ವಿಚಾರಯಾತ್ರೆ ಕಾಂಗ್ರೆಸ್ ಒಂದು ಸುಡುವ ಮನೆ ಎಚ್ಚರ..! ಬಾಬಾ ಸಾಹೇಬರು ಹೀಗೇಕೆ ಹೇಳಿದರು..? ವಿಚಾರ ಗೋಷ್ಠಿ ಕಾರ್ಯಕ್ರಮವನ್ನು ಮಾಜಿ ಶಾಸಕ ಬಿ. ಹರ್ಷವರ್ಧನ್ ದೀಪ ಬೆಳಗಿಸಿ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿ ಪಕ್ಷವು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರ ಯಾತ್ರೆಯನ್ನು ನಡೆಸಿಕೊಂಡು ಬರುತ್ತಿದೆ. ಜನರಿಗೆ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮುಟ್ಟಿಸುವ ಮಹತ್ತರವಾದ ಕಾರ್ಯಕ್ರಮವಾಗಿದೆ.

ಜನರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿದ್ದು ಕಾಂಗ್ರೆಸ್ನವರು. ಸಂವಿಧಾನವನ್ನು ತಿದ್ದುವ ಮೂಲಕ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷ ಅವಮಾನಿಸಿತು. ಬಿಜೆಪಿಯವರು ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆ ಎಂದು ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಅಪಪ್ರಚಾರ ಮಾಡಿತು. ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಆಗುವುದಿಲ್ಲ. ಕಾಂಗ್ರೆಸ್ ನವರು ಅಂಬೇಡ್ಕರ್ ಅವರಿಗೆ ನೋವು ಕೊಟ್ಟು ಅವಮಾನ ಮಾಡಿದ್ದಾರೆ. ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮೊದಲಿನಿಂದಲೂ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಬಾಬಾ ಸಾಹೇಬರ ಹೆಸರು ಹೇಳುವ ನೈತಿಕತೆ ಇಲ್ಲ. ಕಾಂಗ್ರೆಸ್ ಸುಡುವ ಮನೆ ಎಚ್ಚರಿಕೆ ಎಂದು ಅಂದೇ ಬಾಬಾ ಸಾಹೇಬರು ಹೇಳಿದ್ದರು. ಇದನ್ನು ದಲಿತರು ಹಿಂದುಳಿದವರು ಅರ್ಥ ಮನವರಿಕೆ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ಎಸ್ಸಿ ಎಸ್‌ಟಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್ ಸಿ ಮಹದೇವಪ್ಪ ರವರು ಜಾಥ ಮಾಡುವುದರಲ್ಲಿಯೇ ಉಳಿದಿದ್ದಾರೆ. ಅಭಿವೃದ್ಧಿಯಲ್ಲಿ ಕುಂಠಿತವಾಗಿದ್ದು, ಹಣ ದುರುಪಯೋಗದ ಬಗ್ಗೆ ಸ್ಪಷ್ಟತೆ ನೀಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಈ ಸಂದರ್ಭದಲ್ಲಿ ಶಾಸಕ ಶ್ರೀ ವತ್ಸ, ಮಾಜಿ ಸಂಸದ ಮುನಿಸ್ವಾಮಿ, ಮಾಜಿ ಶಾಸಕ ಎಲ್ ನಾಗೇಂದ್ರ , ಡಾ, ರೇವಣ್ಣ , ಸಾಮಾಜಿಕ ಕಾರ್ಯಕರ್ತರಾದ ವಾದಿರಾಜ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಿ. ಚಿಕ್ಕರಂಗನಾಯಕ, ತಾಲ್ಲೂಕು ಅಧ್ಯಕ್ಷ ಕೆಂಡಗಣ್ಣಪ್ಪ, ಪಟ್ಟಣ ಅಧ್ಯಕ್ಷ ಸಿದ್ದರಾಜು, ಪುಟ್ಟಸ್ವಾಮಿ,ರಾಘವೇಂದ್ರ, ಮಹದೇವಪ್ರಸಾದ್, ಮಾಜಿ ಮೇಯರ್‌ ಶಿವಕುಮಾರ್, ನಿಗಮ ಮಂಡಳಿ ಮಾಜಿ ಅಧ್ಯಕ್ಷರಾದ ಎಸ್, ಮಹದೇವಯ್ಯ , ಕೃಷ್ಣಪ್ಪಗೌಡ, ಮಾಜಿ ಮಹಿಳಾ ಅಧ್ಯಕ್ಷೆ ಮಂಗಳ ಸೋಮಶೇಖರ್, ಪ್ರಪುಲ್ಲಾ ಮಲ್ಲಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾ ಮಹೇಶ್, ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.