ನಂಜನಗೂಡು: ಆ.31 ರಂದು ನಂಜನಗೂಡಿನಲ್ಲಿ ಭಗೀರಥ ಜಯಂತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭಾಗವಹಿಸಲಿದ್ದಾರೆ. ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದ ಬಳಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಆ.31 ರಂದು ಭಾನುವಾರ ಮೈಸೂರು ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿರುವ ಭಗೀರಥ ಜಯಂತೋತ್ಸವ ಹಾಗೂ ಉಪ್ಪಾರ ಸಮುದಾಯ ಭವನ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ರವರು ನೆರವೇರಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ತಾಲ್ಲೂಕಿನ ಪ್ರತಿ ಗ್ರಾಮಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ನಂಜನಗೂಡಿನಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.