ನಂಜನಗೂಡು: ದಲಿತ ಸಂಘಟನೆಗಳ ಒಕ್ಕೂಟದಿಂದ ಆಯೋಜನೆ ಮಾಡಿರುವ 207ನೇ ಭೀಮಾ ಕೊರೆಗಾಂವ್ ವಿಜಯೋತ್ಸವದ ಅಂಗವಾಗಿ ಜ.12 ರಂದು ನಂಜನಗೂಡಿನಲ್ಲಿ ನಡೆಯುವ ಜನ ಜಾಗೃತಿ ಸಮಾವೇಶ ಹಿನ್ನೆಲೆಯಲ್ಲಿ ನಂಜನಗೂಡಿನ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಭೀಮಾ ಕೊರೆಗಾಂವ್ ವಿಜಯೋತ್ಸವದ ಜಾಗೃತಿ ರಥಕ್ಕೆ ಚಾಲನೆ ನೀಡಲಾಯಿತು.
ನಂಜನಗೂಡು ನಗರದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಸಲ್ಲಿಸಲಾಯಿತು. ಬಳಿಕ ಭೀಮಾ ಕೊರೆಗಾಂವ್ ವಿಜಯೋತ್ಸವದ ಜಾಗೃತಿ ರಥಕ್ಕೆ ಪ್ರಜಾವಾಣಿ ದಿನಪತ್ರಿಕೆಯ ಮೈಸೂರು ವಿಭಾಗದ ಮುಖ್ಯಸ್ಥರಾದ ನರಸಿಂಹ ಮೂರ್ತಿ ನೀಲಿ ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ ಎಂ ವಿಜಯಕುಮಾರ್, ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್, ಗೌರವಾಧ್ಯಕ್ಷ ಕಾರ್ಯ ಬಸವಣ್ಣ, ಉಪಾಧ್ಯಕ್ಷ ಪುಟ್ಟಸ್ವಾಮಿ, ಜಿಲ್ಲಾ ಸಂಚಾಲಕ ಮಲ್ಲೇಶ್, ತಾಲ್ಲೂಕು ಸಂಚಾಲಕ ಸುರೇಶ್ ಶಂಕರಪುರ, ಪ್ರಧಾನ ಕಾರ್ಯದರ್ಶಿ ಜೈ ಶಂಕರ್, ಯಶ್ವಂತ್, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್ ಸೇರಿದಂತೆ ಹಲವರು ಭಾಗವಹಿಸಿದ್ದರು.