ಮೈಸೂರು: ನಿಯಂತ್ರಣ ತಪ್ಪಿದ ಬೈಕ್ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೇರಳ ಕರ್ನಾಟಕ ಹೆದ್ದಾರಿ ಬಾವಲಿ ಸಮೀಪ ನಡೆದಿದೆ. ಕೇರಳದ ಕೊಟ್ಟಿಯೂರು ದೇವಸ್ಥಾನದಿಂದ ಬರುವಾಗ ಭೀಕರ ಅಪಘಾತ ನಡೆದಿದೆ.
ಮೈಸೂರಿನ ಸಿದ್ದಾರ್ಥ ಬಡಾವಣೆ ಯುವಕ ಅನಂತಭೂಷಣ್ ಸಾವನ್ನಪ್ಪಿದ ಬೈಕ್ ಸವಾರ. ಅಪಘಾತದ ದೃಶ್ಯ ಬಸ್ ನ ಡ್ಯಾಶ್ ಬೋರ್ಡ್ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಸ್ತೆ ಅಂಚಿನಲ್ಲಿ ಸಾಗುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಏಕಾಏಕಿ ಬಸ್ ಗೆ ಢಿಕ್ಕಿ ಹೊಡೆದಿದೆ.
ಹೆಲ್ಮೆಟ್ ಹಾಕಿದ್ದರೂ ಅನಂತಭೂಷಣ್ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಅನಂತಭೂಷಣ್ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು.

