ನಂಜನಗೂಡು: ಯಶಸ್ವಿನಿ ಯೋಜನೆ ಸಹಕಾರ ಇಲಾಖೆಯಲ್ಲಿ ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಗೆ ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಬಿಳುಗಲಿ ಗ್ರಾಮದ ಕುಮಾರ್ ರವರನ್ನು ಟ್ರಸ್ಟಿಯಾಗಿ ಆಯ್ಕೆ ಮಾಡಿ ಸಹಕಾರ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಗ್ರೇಡ್ 3 ಜಿ.ರಂಗನಾಥ್ ಆದೇಶ ನೀಡಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಬಿಳುಗಲಿ ಕುಮಾರ್ ರವರನ್ನು ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಟ್ರಸ್ಟ್ ಗೆ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳ ಬಳಗದ ಪದಾಧಿಕಾರಿಗಳು ಸನ್ಮಾನಿಸಿದರು.
ಬಳಿಕ ಬಿಳುಗಲಿ ಕುಮಾರ್ ಮಾತನಾಡಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ವಿಧಾನಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ ರವರು ನನ್ನನ್ನು ಆಯ್ಕೆ ಮಾಡಿದ್ದಾರೆ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ.
ಸಹಕಾರ ಕ್ಷೇತ್ರಕ್ಕೆ ಒಳಪಡುವ ಕೃಷಿ ಪತ್ತಿನ ಸಹಕಾರ ಸಂಘ, ಹಾಲು ಉತ್ಪಾದಕರ ಸಹಕಾರ ಸಂಘ ಸೇರಿದಂತೆ ಸಹಕಾರ ಸಂಘ ಸಂಸ್ಥೆಗಳಲ್ಲಿ ಯಶಸ್ವಿನಿ ಆರೋಗ್ಯ ಕಾರ್ಡ್ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲು ಹೆಚ್ಚು ಒತ್ತು ನೀಡುತ್ತೇನೆ. ಗ್ರಾಮೀಣ ಭಾಗದಲ್ಲಿ ಸರ್ಕಾರದ ಸೌಲಭ್ಯಗಳನ್ನು ರೈತರು ಪಡೆದುಕೊಳ್ಳಬೇಕು. ಈ ಬಗ್ಗೆ ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹದೇಶ್ವರ ಗಾರ್ಡನ್ ಮಾಲೀಕರಾದ ತಗಡೂರು ಗಾರ್ಡನ್ ಮಹೇಶ್, ಗುತ್ತಿಗೆದಾರರಾದ ಸಿ.ಆರ್ ಮಹದೇವ್, ಉಪ್ಪನಹಳ್ಳಿ ಶಿವಣ್ಣ, ರಾಜೇಶ್, ಗುರುಪಾದಸ್ವಾಮಿ, ಮಹದೇವಸ್ವಾಮಿ, ಹೆಜ್ಜೆಗೆ ರವಿಕುಮಾರ್, ಮುಖಂಡರಾದ ಗಿರೀಶ್, ಶ್ರೀನಿವಾಸ್, ಅಶೋಕ್, ಸುರೇಶ್, ಮಂಜು, ರಘು, ಮಾದಪ್ಪ ಸೇರಿದಂತೆ ಹಲವರು ಹಾಜರಿದ್ದರು.

