ಮೈಸೂರು: ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಬಿಂದುಮಣಿ ರವರು ಅಧಿಕಾರ ಸ್ವೀಕರಿಸಿದರು. ಇದೇ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುತ್ತುರಾಜ್ ರವರನ್ನ ಸರ್ಕಾರ ವರ್ಗಾವಣೆ ಮಾಡಿದ್ದು ಇವರ ಸ್ಥಾನಕ್ಕೆ ಆರ್.ಎನ್.ಬಿಂದುಮಣಿ ರವರನ್ನ ನೇಮಕ ಮಾಡಿ ಆದೇಶ ಹೊರಡಿಸಿತ್ತು.
ಇಂದು ವರ್ಗಾವಣೆಗೊಂಡ ಮುತ್ತುರಾಜ್ ರವರು ಬಿಂದುಮಣಿ ರವರಿಗೆ ಅಧಿಕಾರ ಹಸ್ತಾಂತರಿಸಿದರು.ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದಲ್ಲಿ ಎಸ್ಪಿಯಾಗಿ ಬಿಂದುಮಣಿ ರವರು ಕರ್ತವ್ಯ ನಿರ್ವಹಿಸುತ್ತಿದ್ದರು.ನೂತನ ಡಿಸಿಪಿ ಬಿಂದುಮಣಿ ರವರನ್ನ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ರವರು ಹೂಗುಚ್ಛ ನೀಡಿ ಶುಭ ಹಾರೈಸಿದರು.

