ಮೈಸೂರು: ಭಾರತೀಯ ಜನತಾ ಪಾರ್ಟಿ ಮೈಸೂರು ನಗರ ಕೃಷ್ಣರಾಜ ಕ್ಷೇತ್ರದ ಮಹಿಳಾ ಮೋರ್ಚಾದ ವತಿಯಿಂದ ಇಂದು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಬೇಕಿದ್ದ “ನಾರಿ ಶಕ್ತಿ ವಂದನ್ ಅಧಿನಿಯಮ “ಎಂಬ ಮಹಿಳಾ ಮೀಸಲಾತಿ ಕಾಯಿದೆಗೆ ವಿರೋಧ ವ್ಯಕ್ತ ಪಡಿಸಿದ ಕಾಂಗ್ರೆಸ್ ಹಾಗೂ ಮೈತ್ರಿ ಕೂಟದ ವಿರುದ್ಧ ಕುವೆಂಪು ನಗರದ ಅಂಬೇಡ್ಕರ್ ವೃತ್ತದಿಂದ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಕಛೇರಿಯ ವರೆಗೆ ಪ್ರತಿಭಟನಾ ಪಾದಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಕ್ಷೇತ್ರದ ಅಧ್ಯಕ್ಷರಾದ ಗೋಪಾಲ ರಾಜೇ ಅರಸ್, ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕರಾಜು, ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸರ್ವಮಂಗಳ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ, ಮಾಜಿ ಉಪಮೇಯರ್ ಜಿ. ರೂಪ, ನಗರ ಪಾಲಿಕೆ ಸದಸ್ಯರಾದ. ಛಾಯದೇವಿ. ಶಾರದ. ಸೌಭಾಗ್ಯ ಮೂರ್ತಿ. ಮಾಜಿ ಮೂಡ ಸದಸ್ಯೆ ಲಕ್ಷ್ಮಿದೇವಿ ಹಾಜರಿದ್ದರು.

