ಮೈಸೂರು : ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ತಾಲ್ಲೂಕು ಆಸ್ಪತ್ರೆ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ದ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ವಿನಯ್ ಸಾವಿಗೆ ಕಾರಣವಾದವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಆಸ್ಪತ್ರೆ ಸಮೀಪವೇ ಇರೊ ಡಿವೈಎಸ್ಪಿ ಕಛೇರಿ ಎದುರು ಶವ ಇಟ್ಟು ಪ್ರತಿಭಟನೆ ನಡೆಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೊಡಗಿನ ಇಬ್ಭರು ಕಾಂಗ್ರೆಸ್ ಶಾಸಕರ ವಿರುದ್ದ ಹೋರಾಟಗಾರರು ಘೋಷಣೆ ಕೂಗುತ್ತಿದ್ದಾರೆ.