ತಿ. ನರಸೀಪುರ: ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀ ಗಳಾದ ಶಿವಕುಮಾರ ಸ್ವಾಮೀಜಿಗಳ 118ನೇ ಜಯಂತೋತ್ಸವ ಅಂಗವಾಗಿ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀ ಗಳಾದ ಶಿವಕುಮಾರ ಸ್ವಾಮೀಜಿಗಳ 118ನೇ ಜಯಂತೋತ್ಸವವನ್ನು ಅರ್ಥಪೂರ್ಣವಾಗಿ ಪಟ್ಟಣದ ಜೆ.ಎಸ್.ಎಸ್ ಭವನದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕ ಮತ್ತು ಮಹಿಳಾ ಘಟಕಗಳ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಸಲಾಯಿತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭದ ಜಿಲ್ಲಾಧ್ಯಕ್ಷ ಎಚ್.ವಿ.ಬಸವರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು
ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಇನ್ನೂರಕ್ಕೂ ಹೆಚ್ಚು ಮಂದಿ ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆದರೆ, ರಕ್ತದಾನ ಶಿಬಿರದಲ್ಲಿ 87 ಜನ ರಕ್ತದಾನ ಮಾಡಿದರು.

ದಿವ್ಯ ಸಾನಿಧ್ಯವನ್ನು ವಹಿಸಿದ್ದ ವಾಟಾಳು ಮಠದ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ಮತ್ತು ಆಸರೆಯನ್ನು ಕಲ್ಪಿಸಿದ್ದ ಶಿವಕುಮಾರ ಸ್ವಾಮೀಜಿ ಅವರು ಮಠಮಾನ್ಯಗಳ ಗೌರವವನ್ನು ಉತ್ತುಂಗಕ್ಕೆ ಕೊಂಡೊಯ್ದರು. ಅಂತ ಮಹಾನ್ ತ್ಯಾಗಿಗಳ ಜಯಂತಿಯ ದಿನದಂದು ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಿರುವುದು ಸಮಾಜಮುಖಿ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.
ಈ ಸಂದರ್ಭ ಕಾರ್ಯಕ್ರಮ ದಲ್ಲಿ ರಾಜಶೇಖರ ಸ್ವಾಮೀಜಿ, ಗುರುಸ್ವಾಮಿ ಸ್ವಾಮೀಜಿ, ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಸಿ.ಎಂ. ಪ್ರಕಾಶ್, ಯುವ ಘಟಕದ ಜಿಲ್ಲಾಧ್ಯಕ್ಷ ಅರ್ಜುನ್ ಪಾರ್ಥ, ಯುವ ಘಟಕದ ತಾಲ್ಲೂಕು ಅಧ್ಯಕ್ಷ ಅಶೋಕ್ ಸೇರಿದಂತೆ ಇತರರು ಇದ್ದರು.

