ಮೈಸೂರು

ಬಿಎಸ್‌ಎನ್‌ಎಲ್ ತ್ವರಿತ ಸೇವೆ ನೀಡುವುದು ಅಗತ್ಯ: ಪ್ರತಾಪ ಸಿಂಹ

ಮೈಸೂರು: ಬಿಎಸ್‌ಎನ್‌ಎಲ್ ಉಳಿಯಬೇಕಾದರೆ ಜಿಯೋ, ಏರ್‌ಟೆಲ್‌ನಂತಹ ದೈತ್ಯ ಟೆಲಿಕಾಂ ಕಂಪನಿಗಳಿಗೆ ಸ್ಪರ್ಧೆ ನೀಡುವ ಮಟ್ಟಕ್ಕೆ ತನ್ನ ಸೇವೆಗಳನ್ನು ತ್ವರಿತವಾಗಿ ಗ್ರಾಹಕರಿಗೆ ಒದಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕು ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.

ನಗರದ ಭಾರತ ಸಂಚಾರ ನಿಗಮ ಲಿಮಿಟೆಡ್(ಬಿಎಸ್‌ಎನ್‌ಎಲ್) ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ಸಲಹಾ ಮಂಡಳಿ ಸಭೆಯ ಅಧಕ್ಷತೆವಹಿಸಿ ಮಾತನಾಡಿದ ಅವರು, ಬಿಎಸ್‌ಎಲ್‌ನಿಂದ ಸಮರ್ಪಕ ಸೇವೆಗಳು ದೊರೆಯುತ್ತಿಲ್ಲ ಎಂದು ಗ್ರಾಹಕರು ದೂರುತ್ತಿದ್ದಾರೆ. ಇದರಿಂದಾಗಿ ಹೆಚ್ಚಿನ ಗ್ರಾಹಕರು ಜಿಯೋ, ಏರ್‌ಟೆಲ್, ಐಡಿಯಾದಂತಹ ಸೂಪರ್ ಫಾಸ್ಟ್ ನೆಟ್‌ವರ್ಕ್ ಸೇವೆಗಳ ಕಡೆ ಮುಖ ಮಾಡುತ್ತಿದ್ದಾರೆ. ಹೀಗಾಗಿ ಬಿಎಸ್‌ಎನ್‌ಎಲ್ ಕೂಡ ಇಂದಿನ ಕಾಲಕ್ಕೆ ಅನುಗುಣವಾಗಿ ಸೂಪರ್ ಫಾಸ್ಟ್ ನೆಟ್‌ವರ್ಕ್ ಸೇರಿದಂತೆ ಇತರೆ ಸೇವೆಗಳನ್ನು ಮೇಲ್ದರ್ಜೆಗೆ ಏರಿಕೆ ಮಾಡುವ ಬಗ್ಗೆ ಆದಷ್ಟು ಬೇಗ ಚಿಂತನೆ ಮಾಡಬೇಕು ಎಂದು ಸಲಹೆ ನೀಡಿದರು.

ಚಾಮರಾಜನಗರ, ಕೊಡಗು, ಎಚ್.ಡಿ.ಕೋಟೆಯಂತಹ ಹಿಂದುಳಿದ ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟವರ್ ಕಂಬಗಳನ್ನು ಸ್ಥಾಪಿಸಬೇಕು. ಮೈಸೂರು ಸುತ್ತಮುತ್ತಲಿನ ಪ್ರದೇಶದಲ್ಲಿ ನೆಟ್‌ ವರ್ಕ್ ಸಮಸ್ಯೆ ಅಷ್ಟೇನೂ ಇಲ್ಲದಿರುವುದರಿಂದ ಹಿಂದುಳಿದ ತಾಲೂಕುಗಳ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಿದರೆ, ಹೆಚ್ಚು ಗ್ರಾಹಕರು ಸಿಗುತ್ತಾರೆ. ಇದರಿಂದ ಸಂಸ್ಥೆಗೆ ಹೆಚ್ಚು ವರಮಾನವೂ ಬರುತ್ತದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಭಾರತ್‌ನೆಟ್ ಉದ್ಯಮಿ ಯೋಜನೆಯಡಿ ಸರ್ಕಾರಿ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ, ನ್ಯಾಯಬೆಲೆ ಅಂಗಡಿಗಳಿಗೆ ನೀಡುತಿದ್ದ ಇಂಟರ್‌ನೆಟ್ ಸೌಲಭಕ್ಕೆ ರಾಜ್ಯ ಸರ್ಕಾರ ತಡೆ ನೀಡಿದೆ. ಇದರಿಂದ ಸಾಕಷ್ಟು ಜನರು ಇಂಟರ್‌ನೆಟ್ ಸೌಲಭದಿಂದ ವಂಚಿತರಾಗಿದ್ದಾರೆ ಎಂದು ರಾಜ್ಯ ಸರ್ಕಾರ ವಿರುದ್ಧ ಅಸಮಧಾನ ಹೊರಹಾಕಿದರು.

ನಮ್ಮದು ಇತ್ತ ಪೂರ್ಣ ಬಂಡವಾಳಶಾಹಿ ವ್ಯವಸ್ಥೆಯೂ ಅಲ್ಲ, ಅತ್ತ ಸಮಾಜವಾದಿ ವ್ಯವಸ್ಥೆಯೂ ಅಲ್ಲದ ಕಾರಣ ಬಿಎಸ್‌ಎನ್‌ಎಲ್ ನಂತಹ ಸರ್ಕಾರಿ ಉದ್ಯಮಗಳಿಗೆ ಸರಿಯಾದ ಕಾಯಕಲ್ಪ ಸಿಗುತಿಲ್ಲ. ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಇತರೆ ಸಂಸ್ಥೆಗಳೊಂದಿಗೆ ಸ್ಪರ್ಧೆ ನೀಡುವ ಅನಿವಾರ್ಯ ಎಲ್ಲರಿಗೂ ಇದೆ. ಆದ್ದರಿಂದ ನಿಮ್ಮ ಸೌಲಭಗಳು ಹೆಚ್ಚು ಜನರಿಗೆ ತಲುಪಲು ಹೆಚ್ಚು ಶ್ರಮಹಾಕಬೇಕು ಎಂದು ಹೇಳಿದರು.

 

Sneha Gowda

Recent Posts

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

7 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

56 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

1 hour ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

2 hours ago