ಮೈಸೂರು : ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ಕಟ್ಟಡ ಡೆಮೋಲಿಸ್ ಸಮಯದಲ್ಲಿ ಏಕಾಏಕಿ ಕುಸಿದಿದೆ. 14 ಜನ ಕಟ್ಟಡದ ಕೆಲಸವನ್ನು ಕಾರ್ಮಿಕರು ಮಾಡುತ್ತಿದ್ದರು. ಕೆಲಸ ಮಾಡ್ತಿದ್ದ ಸಂದರ್ಭದಲ್ಲಿ ನಿನ್ನೆ 4 ಗಂಟೆ ವೇಳೆಯಲ್ಲಿ ಘಟನೆ ನಡೆದಿದೆ.
ಏಕಾಏಕಿ ಕಟ್ಟಡ ನೆಲ ಕಚ್ಚಿದೆ. 13 ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಟ್ಟಡ ಕುಸಿತದಲ್ಲಿ ಓರ್ವ ಕಾರ್ಮಿಕ ಸಿಲುಕಿದ್ದಾನೆ. ಕಾರ್ಮಿಕರನನ್ನು ಅಗ್ನಿಶಾಮಕ ಸಿಬ್ಬಂದಿ ಹಾಗು ಪೊಲೀಸರು ಹುಡುಕುತ್ತಿದ್ದಾರೆ. ಸ್ಥಳಕ್ಕೆ ಶಾಸಕ ಕೆ .ಹರೀಶ್ ಗೌಡ ಮತ್ತು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆಗಮಿಸಿದ್ದಾರೆ.