ಮೈಸೂರು: ಬಸ್- ಲಾರಿ ನಡುವೆ ನಡೆದ ಅಪಘಾತದಲ್ಲಿ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣದ ಕಿರನಲ್ಲಿ ಗೇಟ್ ಬಳಿ ನಡೆದಿದೆ.

ಘಟನೆಯಲ್ಲಿ ಇಪ್ಪತ್ತಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪಿರಿಯಾಪಟ್ಟಣದಿಂದ ಮೈಸೂರು ಮಾರ್ಗವಾಗಿ ಲಾರಿ ಬರುತ್ತಿತ್ತು. ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಮುಖಾಮುಖಿ ಢಿಕ್ಕಿ ಹೊಡೆದಿದೆ.

ಇಂದು ಮುಂಜಾನೆ 3.30ರಲ್ಲಿ ಅಪಘಾತ ಸಂಭವಿಸಿದೆ. ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುಬ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.