ಮೈಸೂರು: ಸ್ವಿಫ್ಟ್ ಡಿಸೈರ್ ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಲಕಾಡು ಮುಖ್ಯರಸ್ತೆಯ ಚೌಹಳ್ಳಿ ಗ್ರಾಮದ ಬಳಿ ನಡೆದಿದೆ.

ಪ್ಯಾಸೆಂಜರ್ ಆಟೋದಲ್ಲಿ ಸುಮಾರು 9 ಮಂದಿ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ.

ಆಟೋದಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಟಿ ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

View this post on Instagram

A post shared by News Karnataka (@newskarnataka)