ಮೈಸೂರು : ಏಕಾಏಕಿ ಕಾರು ಹೊತ್ತಿ ಉರಿದ‌ ಘಟನೆ ಮೈಸೂರಿನ ಜಯಲಕ್ಷ್ಮಿಪುರಂನ ಡಿ ಆರ್ ಎಂ ಆಸ್ಪತ್ರೆ ಸನಿಹದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಕಾರು ಬಹತೇಕ ಸುಟ್ಟು ಕರಕಲಾಗಿದೆ. ಕಾರು ಉರಿಯುತ್ತಿರುವುದನ್ನು ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.

ಕೂಡಲೇ ಅಗ್ನಿಶಾಮಕ ದಳದ ಸಿಬಂದ್ದಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬೆಂಕಿ‌ ನಂದಿಸುವ ಕಾರ್ಯಾಚರಣೆ ಮಾಡಲಾಯಿತು.