ಮೈಸೂರು: ತನ್ನ ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿಕೊಂಡು ಕಾರಣ ಚಾಲಕ ಎಸ್ಕೇಪ್ ಆಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆಯ ಟಿಬೆಟಿಯನ್ ಪೆಟ್ರೋಲ್ ಬಂಕಿನಲ್ಲಿ ನಡೆದಿದೆ.

ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿ ರಾಂಗ್ ಪೇಮೆಂಟ್ ಮಾಡಿ ಕಾರಿನ ಚಾಲಕ ಯಾಮಾರಿಸಿದ್ದಾನೆ. ಬೈಲಕುಪ್ಪೆ ಪೊಲೀಸ್ ಠಾಣೆಗೆ ಪೆಟ್ರೋಲ್ ಬಂಕ್ ಸಿಬ್ಬಂದಿಗಳು ದೂರು ದಾಖಲು ಮಾಡಿದ್ದಾರೆ.