News Karnataka Kannada
Tuesday, April 23 2024
Cricket
ಚಾಮರಾಜನಗರ

ಅತೀ ವೇಗದ ಚಾಲನೆಯಿಂದ ಮರಕ್ಕೆ ಕಾರು ಢಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, 6 ಮಂದಿಗೆ ಗಾಯ

Accident.
Photo Credit :

ಗುಂಡ್ಲುಪೇಟೆ :  ತಾಲೂಕಿನ ಕಲ್ಲಿಗೌಡನಹಳ್ಳಿ ಗೇಟ್ ಬಳಿ ಚಾಲಕನ ಅತೀ ವೇಗದ ಚಾಲನೆಯಿಂದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀ ರ ಗಾಯಗೊಂಡಿರುವ ಘಟನೆ  ನಡೆದಿದೆ.

ಹೈದರಾಬಾದ್‌ ಮೂಲಕ ಜಯಲಕ್ಷ್ಮೀ(50) ಸ್ಥಳದಲ್ಲೆ ಮೃತ ಪಟ್ಟಿದ್ದಾರೆ. ವೆಂಕಯ್ಯ(54) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಂಡೀಪುರ ಮಾರ್ಗವಾಗಿ ಊಟಿ ಕಡೆ ಪ್ರಯಾಣಿಸುತ್ತಿದ್ದ ಕಾರು ಅತಿವೇಗವಾಗಿ ಬಂದ ಪರಿಣಾಮ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡದಿದ್ದು, ಜಯಲಕ್ಷ್ಮೀ ಸ್ಥಳದಲ್ಲೇ ಸಾವನ್ನಪ್ಪಿದ್ದು, ವೆಂಕಯ್ಯ, ರಾಜೇಶ್, ಪದ್ಮಾವತಿ ಹಾಗೂ ಇಬ್ಬರು ಮಕ್ಕಳು ಮತ್ತು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಚಾಮರಾಜನಗರ ಜಿಲಾಸ್ಪತ್ರೆಗೆ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು