News Karnataka Kannada
Friday, April 19 2024
Cricket
ಚಾಮರಾಜನಗರ

ಸಂಭವನೀಯ ಪ್ರಕೃತಿ ವಿಕೋಪ ಎದುರಿಸಲು ಸನ್ನದ್ದರಾಗಲು ಸೂಚನೆ

Cham
Photo Credit :

ಚಾಮರಾಜನಗರ: ಮಾನ್ಸೂನ್ ಸಂದರ್ಭದಲ್ಲಿ ಅತಿವೃಷ್ಠಿ, ಪ್ರವಾಹ, ನೆರೆ ಹಾವಳಿ ಸೇರಿದಂತೆ ಪ್ರಕೃತಿ ವಿಕೋಪಗಳಿಂದ  ಯಾವುದೇ ಅನಾಹುತವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸನ್ನದ್ದರಾಗಿರಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಾನ್ಸೂನ್ ವೇಳೆಯಲ್ಲಿ ಸಂಭವಿಸಬಹುದಾದ ಅತಿವೃಷ್ಠಿ, ಪ್ರವಾಹ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಲು ಸಿದ್ದರಾಗಿರಬೇಕು. ಕಂದಾಯ, ಪಂಚಾಯತ್ ರಾಜ್ ಇಲಾಖೆ, ಅಗ್ನಿಶಾಮಕ ದಳ, ಪೊಲೀಸ್, ಸ್ಥಳೀಯ ನಗರ ಸಂಸ್ಥೆಗಳು ಒಟ್ಟುಗೂಡಿ ಯಾವುದೇ ಪರಿಸ್ಥಿತಿ ಉಂಟಾದರೂ ನಿಭಾಯಿಸಲು ಅಗತ್ಯ ಕ್ರಮಗಳಿಗೆ ಮುಂದಾಗಬೇಕಾಗುತ್ತದೆ. ವಿಪತ್ತು ಕಾರ್ಯ ನಿರ್ವಹಣೆಗೆ ಪ್ರತ್ಯೇಕವಾಗಿ ವಿಶೇಷ ತಂಡ ರಚಿಸಬೇಕು ಎಂದರು.

ಕೊಳ್ಳೇಗಾಲ ತಾಲೂಕಿನ ದಾಸನಪುರ, ಅಗ್ರಹಾರ, ಹರಳೆ, ಹಳೆ ಹಂಪಾಪುರ, ಹೊಸ ಹಂಪಾಪುರ, ಹಳೆ ಅಣಗಳ್ಳಿ, ಮುಳ್ಳೂರು, ಯಡಕುರಿಯ, ಧನಗೆರೆ, ಸರಗೂರು ಗ್ರಾಮಗಳಲ್ಲಿ ಈ ಹಿಂದೆ ಪ್ರವಾಹ ತಲೆದೋರಿದ್ದು ಇಂತಹ ಸಂಭವನೀಯ ಪ್ರವಾಹ  ಪೀಡಿತ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪ್ರಕೃತಿ ವಿಕೋಪ ಸಂಭವಿಸಿದರೆ ಕಾಳಜಿ ಕೇಂದ್ರಗಳನ್ನು ತೆರೆಯುವ ಅಗತ್ಯ ಬೀಳಬಹುದು. ಇದಕ್ಕಾಗಿ ಸ್ಥಳ ಗುರುತಿಸಿ ಅವಶ್ಯಕ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ನೀರಾವರಿ ಕಾಲುವೆಗಳು, ಚೆಕ್ ಡ್ಯಾಂಗಳಲ್ಲಿ ಹೂಳು ತೆಗೆಯಬೇಕು. ಗಿಡ ಗಂಟಿ, ಕಸ ತ್ಯಾಜ್ಯಗಳನ್ನು ತೆರವುಗೊಳಿಸಬೇಕು. ಸಂಭವನೀಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ವಿಪತ್ತು ನಿರ್ವಹಣೆ ಕುರಿತ ಅಣಕು ಕಾರ್ಯಚರಣೆಯನ್ನು ನಡೆಸಬೇಕು. ಗ್ರಾಮ  ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆ ಕರೆದು ಅಗತ್ಯ ಮಾರ್ಗದರ್ಶನ ಸಿದ್ದತಾ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು. ತಾಲೂಕು ಮಟ್ಟದಲ್ಲಿಯೂ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಭೆ ನಡೆಸಬೇಕು ಎಂದರು.

ಮಾನ್ಸೂನ್ ವೇಳೆಯಲ್ಲಿ ಗಣಿಗಾರಿಕೆ ಪ್ರದೇಶಗಳಲ್ಲಿ ಅವಘಡಗಳು ಸಂಭವಿಸದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ವಾಹನ, ಯಂತ್ರೋಪಕರಣಗಳಿಂದಾಗುವ ಅನಾಹುತಗಳು, ಸಡಿಲಗೊಂಡ ಗಣಿ ಪ್ರದೇಶದ ಭಾಗದಲ್ಲಿ ಉಂಟಾಗಬಹುದಾದ ಭೂಕುಸಿತಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ವಿಶೇಷ  ಗಮನಹರಿಸುವಂತೆ ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಿರುಗಾಳಿ, ಪ್ರವಾಹ, ಅತೀವೃಷ್ಠಿ ಸಮಯದಲ್ಲಿ ವಹಿಸಬೇಕಿರುವ ಸುರಕ್ಷತಾ ಕ್ರಮಗಳಿಗೆ ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ  ನಿಗಮದ ಅಧಿಕಾರಿ ಸಿಬ್ಬಂದಿ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಬೇಕು. ಕೋವಿಡ್ ಜೊತೆಗೆ ಪ್ರವಾಹ, ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯ, ನೀರು ಹಾಗೂ ಸೊಳ್ಳೆಗಳಿಂದ ಹರಡುವ ರೋಗಗಳ ತಡೆಗೆ ಆರೋಗ್ಯ ಇಲಾಖೆ ಗಮನ ಹರಿಸಬೇಕು. ಅಲ್ಲದೇ ನೀರಿನ ಮಾದರಿಗಳನ್ನು ಪರೀಕ್ಷಿಸಿ ಸುರಕ್ಷತೆ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು