ಕಾಮಗಾರಿ ಗುಣಮಟ್ಟದಿಂದ ನಿರ್ವಹಿಸಲು ಸೂಚನೆ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಪುಣ್ಯ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಂಪರ್ಕ  ಕಲ್ಪಿಸುವ ಕೌದಳ್ಳಿ-ರಾಮಾಪುರ ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ವಸತಿ, ಮೂಲಸೌಲಭ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ವಿ.ಸೋಮಣ್ಣ ಅವರು ಸೂಚಿಸಿದರು.

ಹನೂರು ತಾಲೂಕಿನ ರಾಮಾಪುರದಲ್ಲಿ  20 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ  ಅವರು ಮಾತನಾಡಿ, ಮಲೆ ಮಹದೇಶ್ವರರು ನಡೆದಾಡಿದ ಪುಣ್ಯ ಭೂಮಿಗೆ ಸಹಸ್ರಾರು ಜನರು ಭೇಟಿ ನೀಡುತ್ತಾರೆ. ಹೀಗಾಗಿ ರಸ್ತೆಗಳನ್ನು ಸಮರ್ಪಕವಾಗಿ ನಿರ್ವಹಿಸಿ ಅನುಕೂಲ ಕಲ್ಪಿಸಲಾಗುತ್ತಿದೆ. 20 ಕೋಟಿ ರೂ. ವೆಚ್ಚದ ಅನುದಾನದಲ್ಲಿ ಪ್ರಸ್ತುತ ಕೌದಳ್ಳಿ-ರಾಮಾಪುರ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ನಿಲ್ಲದೇ ಎರಡು ಬದಿಯಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯುವಂತೆ ಕಾಮಗಾರಿ ಕೈಗೊಳ್ಳಬೇಕು. ಗುಣಮಟ್ಟದ ಕಾಮಗಾರಿ ಆಗಬೇಕು ಎಂದು ಸಚಿವರು ತಿಳಿಸಿದರು.

ಹನೂರಿನಿಂದ ಮಲೆ ಮಹದೇಶ್ವರಬೆಟ್ಟ ಹಾಗೂ ಪಾಲಾರ್ ವರೆಗೆ 130 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಯೂ ನಡೆಯಲಿದೆ. ಕಾಮಗಾರಿ ಸಂದರ್ಭದಲ್ಲಿ ತಿರುವುಗಳು ಇರುವ ಕಡೆ ತಡೆಗೋಡೆ ನಿರ್ಮಾಣ ಮಾಡಬೇಕು. ಬೆಟ್ಟದಿಂದ  ಪಾಲಾರ್ ವರೆಗಿನ ರಸ್ತೆಯೂ ಸಹ ಸಮರ್ಪಕವಾಗಿ ನಿರ್ವಹಿಸಬೇಕು. ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಇನ್ನೂ ಹಲವು ಸೌಲಭ್ಯಗಳನ್ನು ಒದಗಿಸಬೇಕಿದೆ. ಇದು ನಮ್ಮ ಕರ್ತವ್ಯ ಹಾಗೂ ಸಂಕಲ್ಪವಾಗಿದೆ. ಈಗಾಗಲೇ ಕೊಳ್ಳೇಗಾಲದಿಂದ ಹನೂರಿನ ವರೆಗೆ ಕೆಶಿಪ್ ಅಡಿ ರಸ್ತೆ ಅಭಿವೃದ್ಧಿ ಪ್ರಗತಿಯಲ್ಲಿದೆ ಎಂದರು.

ಜಿಲ್ಲೆಯು ಶೇ. 52ರಷ್ಟು ಅರಣ್ಯ ಪ್ರದೇಶವನ್ನು ಹೊಂದಿದೆ. ಮಳೆಯಾಶ್ರಿತ ಪ್ರದೇಶವು ಸಾಕಷ್ಟಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕೆರೆಗಳಿಗೆ ನೀರು ತುಂಬಿಸಲು ವಿಸ್ತೃತ ಯೋಜನೆ ತಯಾರಿಸಿ ಚಾಲನೆ ನೀಡುವ ಉದ್ದೇಶ ಹೊಂದಲಾಗಿದೆ. ಜನರಿಗೆ ಕುಡಿಯುವ ನೀರು ಇನ್ನಿತರ ಮೂಲ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಸರ್ಕಾರದ ಸವಲತ್ತುಗಳನ್ನು ಜನಸಾಮಾನ್ಯರಿಗೆ ಸರಿಯಾಗಿ  ತಲುಪಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅಗತ್ಯ ನೆರವು ನೀಡಬೇಕು ಎಂದು ಸಚಿವರು ತಿಳಿಸಿದರು.

ಶಾಸಕರಾದ ಆರ್. ನರೇಂದ್ರ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾದ ಎಂ. ರಾಮಚಂದ್ರ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದಾಕ್ಷಾಯಿಣಿ, ಉಪಾಧ್ಯಕ್ಷರಾದ ಮುರುಗೇಶ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಬಸವರಾಜು, ಮುಖಂಡರಾದ ದತ್ತೇಶ್, ಡಾ. ಪ್ರೀತನ್, ವೆಂಕಟೇಶ್, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ  ಎಂಜಿನಿಯರ್ ರಾಥೋಡ್, ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್ ಇತರರು ಉಪಸ್ಥಿತರಿದ್ದರು.

Sneha Gowda

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

20 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

38 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

52 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago