ಕೊಳ್ಳೇಗಾಲ: ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಅವರ ಪತ್ನಿ ವಿಜಯಾ (64) ಅನಾರೋಗ್ಯದಿಂದ ಭಾನುವಾರ ರಾತ್ರಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.
ವಿಜಯಾ ಅವರು ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ ರಾತ್ರಿ ಮನೆಯಲ್ಲಿ ಉಸಿರಾಟದ ಸಮಸ್ಯೆ ತೀವ್ರವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 11.30 ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಂಡ್ಯ ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ಆಗಿದ್ದ ವಿಜಯಾ ಅವರು ಮೂರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಮಹೇಶ್ ಮತ್ತು ವಿಜಯಾ ದಂಪತಿಗೆ ಓರ್ವ ಪುತ್ರ ಇದ್ದಾರೆ.
ಕಾನ್ಸಿ ಫೌಂಡೇಷನ್ನಲ್ಲಿ ಅಂತ್ಯಕ್ರಿಯೆ: ವಿಜಯಾ ಅವರ ಅಂತ್ಯಕ್ರಿಯೆಯನ್ನು ಇಂದು ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದು, ಬೆಂಗಳೂರಿನ ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದ ಬಳಿ ಇರುವ ಕಾನ್ಶ್ ಫೌಂಡೇಶನ್ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.