ಗುಂಡ್ಲುಪೇಟೆ: ಶಿವಪುರದಲ್ಲಿ ಬೋನಿಗೆ ಬಿದ್ದ ಚಿರತೆ

ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಕಾಡಿನಿಂದ ಹೊರಬಂದು ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಚಿರತೆಯು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಚಿರತೆಯು ಅಡ್ಡಾಡುತ್ತಾ ಸುತ್ತಮುತ್ತ ರೈತರ ಜಾನುವಾರುಗಳನ್ನು ಕೊಂದು ತಿನ್ನುವ ಮೂಲಕ  ಆತಂಕವನ್ನು ಸೃಷ್ಟಿಸಿತ್ತು. ಜಾನುವಾರುಗಳನ್ನು ಕೊಟ್ಟಿಗೆಯಿಂದ ಹೊರಕ್ಕೆ ಮೇಯಲು ಬಿಡಲು ಭಯಪಡುವಂತಾಗಿತ್ತು. ಹೀಗಾಗಿ ಗ್ರಾಮಸ್ಥರು ಬೋನಿಟ್ಟು ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು.

ರೈತರ ಮನವಿಯ ಮೇರೆಗೆ ರೈತ ಮಹೇಶ್ ಕುಮಾರ್ ಅವರ ಜಮೀನಿನಲ್ಲಿ ಬೋನನ್ನು ಇಡಲಾಗಿತ್ತು. ಇದೀಗ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಸೆರೆಯಾದ ಚಿರತೆಯನ್ನು ಬಂಡೀಪುರ ಹುಲಿಸಂರಕ್ಷಿತ ಅರಣ್ಯ ಪ್ರದೇಶದ ಅಧಿಕಾರಿಗಳು ಅರಣ್ಯಕ್ಕೆ ಬಿಟ್ಟಿದ್ದಾರೆ.

Sneha Gowda

Recent Posts

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

7 mins ago

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

17 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

25 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

42 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

48 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

1 hour ago