News Karnataka Kannada
Sunday, April 28 2024
ಚಾಮರಾಜನಗರ

ಚಾಮರಾಜನಗರದಲ್ಲಿ ಏಳು ಚಾಲಕರಿಗೆ ಚಿನ್ನದ ಪದಕ ಪ್ರದಾನ

Ksrtc
Photo Credit :

ಚಾಮರಾಜನಗರ: ಕೆಎಸ್‌ಆರ್‌ಟಿಸಿಯ ಚಾಮರಾಜನಗರ ವಿಭಾಗದ ಏಳು ಮಂದಿ ಚಾಲಕರು ಅಪಘಾತ ರಹಿತವಾಗಿ ಬಸ್‌ ಚಾಲನೆ ಮಾಡಿದ್ದರಿಂದ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದು ಅವರಿಗೆ ಪದಕಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಪ್ರದಾನ ಮಾಡಿದ್ದಾರೆ.

ಚಾಮರಾಜನಗರ ಘಟಕದ ಬಸವರಾಜು, ಗುಂಡ್ಲುಪೇಟೆ ಘಟಕದ ನಂಜುಂಡಸ್ವಾಮಿ ಆರ್‌., ಸಿದ್ದರಾಜು ಆರ್‌, ಚಂದ್ರಶೇಖರ ಡಿ.ಜೆ., ಮಹದೇವನಾಯ್ಕ ಹಾಗೂ ಕೊಳ್ಳೇಗಾಲ ಘಟಕದ ವಿ.ಗೋವಿಂದಯ್ಯ, ಎಸ್‌.ರಾಚಯ್ಯ ಅವರು 2017 ಹಾಗೂ 2018ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದರು.

ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ ಮಾಡುವ ವೇಳೆ ಶಾಸಕ ಸಿ.ಪುಟ್ಟರಂಗಶೆಟ್ಟಿ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ನಗರಸಭೆ ಅಧ್ಯಕ್ಷೆ ಸಿ.ಎಂ ಆಶಾ, ಉಪಾಧ್ಯಕ್ಷೆ ಪಿ.ಸುಧಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಪಂ ಸಿಇಒ ಕೆ.ಎಂ ಗಾಯತ್ರಿ, ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಸಂತೋಷ್‌ಕುಮಾರ್‌, ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸುಂದರ್ ರಾಜ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಬಿ ಹಾಗೂ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು