ಚಾಮರಾಜನಗರದಲ್ಲಿ ಗಾಳಿ ಸಹಿತ ಸುರಿದ ಮಳೆಗೆ ಬೆಳೆ ನಾಶ

ಚಾಮರಾಜನಗರ: ಬಿಸಿಲಿನ ಝಳಕ್ಕೆ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ, ಆದರೆ ಗಾಳಿ ಸಹಿತ ಸುರಿದ ಮಳೆಗೆ ಜೋಳದ ಬೆಳೆ ನೆಲಕಚ್ಚಿದ್ದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ರೈತರದ್ದಾಗಿದೆ.

ಜಿಲ್ಲೆಯ ಹನೂರು ತಾಲ್ಲೂಕಿನ ಅಜ್ಜೀಪುರ ಸಮೀಪದ ಗಂಗನದೊಡ್ಡಿ ಗ್ರಾಮದಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಗ್ರಾಮದ ಶ್ರೀಕಂಠರಾದ್ಯ ರವರಿಗೆ ಸೇರಿದ ಜೋಳದ ಬೆಳೆ ಸಂಪೂರ್ಣ ನೆಲಕಚ್ಚಿದೆ. ಇದರಿಂದಾಗಿ ರೈತ ಶ್ರೀಕಂಠರಾದ್ಯ ಕಂಗಲಾಗಿದ್ದಾರೆ. ಇನ್ನೊಂದೆಡೆ ವೆಂಕಟೇಶ್, ಪಾಪಣ್ಣ, ಅಮ್ಜದ್ ಖಾನ್ ಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಬಾಳೆಯೂ ಗಾಳಿಗೆ ಮುರಿದು ಬಿದ್ದಿದೆ.

ಈ ವ್ಯಾಪ್ತಿಯಲ್ಲಿ ಸಿಡಿಲು, ಗಾಳಿ ಸಹಿತ ಮಳೆ ಸುರಿದಿದ್ದು,  ಗ್ರಾಮದ ಮನೆಯೊಂದರ ಮೇಲ್ಛಾವಣಿ ಕುಸಿತ ಘಟನೆ ನಡೆದಿದ್ದು, ಮನೆಯಲ್ಲಿದ್ದರಿಗೆ ಗಾಯವಾಗಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೆಲ್ಲದರ ನಡುವೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಂತ್ತಿರುವ ತಮಿಳುನಾಡಿನ ತಾಳವಾಡಿ ಸುತ್ತ ಮುತ್ತ ಭಾರಿಮಳೆಯಾಗಿದ್ದು, ಬಿಸಿಲಿನ ತಾಪಮಾನಕ್ಕೆ ಬೆಂಡಾಗಿ ಹೋಗಿದ್ದ ತಾಳವಾಡಿ ಜನತೆಯ ಮುಖದಲ್ಲಿ ಮಂದಹಾಸ ಮೂಡಿದೆ. ತಾಳವಾಡಿ ಸೂಸಯ್ಯಪುರಂ ಡಿಕಿನರೈ, ಕರಲವಾಡಿ ಸೇರಿದಂತೆ ಹಲವಾರು ಕಡೆ ಭಾರಿ ಮಳೆಯಾಗಿದೆ.

Sneha Gowda

Recent Posts

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

2 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

13 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

23 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

34 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

40 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

44 mins ago