ಚಾಮರಾಜನಗರದಲ್ಲಿ ಶೀಘ್ರ ಶಾಲಾ ಕಾಲೇಜು ಪ್ರಾರಂಭಿಸಲು ಸೂಚನೆ ; ಸಚಿವ ಸೋಮಶೇಖರ್‌

ಚಾಮರಾಜನಗರ: ಶೇಕಡಾ 2ಕ್ಕಿಂತ ಕಡಿಮೆ ಕೋವಿಡ್ ಪಾಸಿಟಿವಿಟಿ ದರ ಇರುವ ಕಡೆ ಶಾಲೆಗಳನ್ನು ಆರಂಭಿಸುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಚಾಮರಾಜನಗರ ಜಿಲ್ಲೆಯ ಗಡಿ ಭಾಗದ ತಾಲೂಕುಗಳ ಸ್ಥಿತಿಗತಿ ಬಗ್ಗೆ ಸಭೆ ನಡೆಸಿದ ಸಹಕಾರ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಸಮಗ್ರ ವಿವರಣೆಯನ್ನು ಪಡೆದುಕೊಂಡರು. ಬಳಿಕ ಶೀಘ್ರದಲ್ಲಿ ಶಾಲೆ-ಕಾಲೇಜು ಆರಂಭಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದರು.
ಕೊಳ್ಳೇಗಾಲದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ಕೋವಿಡ್ 19ರ ಸ್ಥಿತಿಗತಿಗಳು, ತೆಗೆದುಕೊಂಡ ಕ್ರಮಗಳು ಹಾಗೂ ಇದೇ ಆಗಸ್ಟ್ ಕೊನೇ ವಾರದಲ್ಲಿ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಸರ್ಕಾರ ತೀರ್ಮಾನ ಕೈಗೊಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ಶೇಕಡಾ 2ಕ್ಕಿಂತ ಕಡಿಮೆ ಇದೆ. ಆದರೆ, ಇದು ಕೇರಳ ಹಾಗೂ ತಮಿಳುನಾಡು ಗಡಿಭಾಗವನ್ನು ಹೊಂದಿರುವುದರಿಂದ ನಿರ್ಲಕ್ಷ್ಯ ಮಾಡುವಂತಿಲ್ಲ. ಈ ನಿಟ್ಟಿನಲ್ಲಿ ಏನೇನು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಾಮರಾಜನಗರ ಜಿಲ್ಲೆಯಲ್ಲಿ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಈಗಾಗಲೇ ಸೂಚನೆ ಇದೆ. ಕಳೆದ ವರ್ಷದ ಮಾಹಿತಿಯಂತೆ ಜಿಲ್ಲೆಯಲ್ಲಿ 9 ಮತ್ತು 10ನೇ ತರಗತಿಯ 37,580 ವಿದ್ಯಾರ್ಥಿಗಳಿದ್ದು, ಇವರಲ್ಲಿ 1716 ಮಕ್ಕಳು ಹಾಸ್ಟೆಲ್ ಗಳಲ್ಲಿ ವಾಸವಾಗಿದ್ದರು. ಎಸ್ಎಸ್ಎಲ್‌ಸಿಯಿಂದ ಉತ್ತೀರ್ಣರಾಗಿ ಪ್ರಥಮ ಪಿಯುಸಿ ಅಭ್ಯಾಸ ಮಾಡಲಿರುವ 11,600 ಮಕ್ಕಳಿದ್ದು, ಪ್ರಥಮ ಪಿಯುಸಿಯಿಂದ ದ್ವಿತೀಯ ಪಿಯುಸಿಗೆ 7502 ಮಕ್ಕಳು ಉತ್ತೀರ್ಣರಾಗಿದ್ದಾರೆ. ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ 1628 ಶಿಕ್ಷಕರಿದ್ದು, ಇವರಲ್ಲಿ 1328 ಶಿಕ್ಷಕರಿಗೆ ವ್ಯಾಕ್ಸಿನೇಶನ್ ಆಗಿದೆ ಎಂದು ಅಧಿಕಾರಿಗಳು ಸಭೆಯ ಮೂಲಕ ಸಚಿವರ ಗಮನಕ್ಕೆ ತಂದರು. ಆಗ ಮಾತನಾಡಿದ ಸಚಿವರು, ಬಾಕಿ ಉಳಿದಿರುವ 294 ಮಂದಿಗೆ ಶೀಘ್ರವೇ ಲಸಿಕೆ ಹಾಕಿಸಬೇಕು. ಎಲ್ಲರೂ ಸಂಪೂರ್ಣ ವ್ಯಾಕ್ಸಿನೇಶನ್ ಪಡೆಯಬೇಕು ಎಂದು ಸೂಚನೆ ನೀಡಿದರು.

Indresh KC

Recent Posts

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

13 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

38 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

55 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

1 hour ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago