ಚಾಮರಾಜನಗರ : ಅಳಿಯನ ಕೊಂದ ಮಾವ ಪೊಲೀಸರಿಗೆ ಶರಣು

ಚಾಮರಾಜನಗರ : ಮಗಳಿಗೆ ಕಿರುಕುಳ ನೀಡುತ್ತಿದ್ದ ಅಳಿಯನನ್ನೇ ಮಾವ ಕೊಂದು ಹಾಕಿರುವ  ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸಮೀಪದ ಜಾಗೇರಿಯಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲದ ಜಾಗೇರಿಯ ಅಂಥೋಣಿರಾಜ್ ಮೃತ ದುರ್ದೈವಿ. ಮಗಳಿಗೆ ಕಿರುಕುಳ ನೀಡುತ್ತಿದ್ದ ಅಳಿಯ  ಮನೆಯಲ್ಲಿ ಕುಡಿದು ಮಲಗಿದ್ದ ವೇಳೆ  ತಲೆ ಮೇಲೆ ಕಲ್ಲು ಹಾಕಿ ಮಾವ ಜೂಲಿಯನ್ ರಾಜು ಕೊಲೆ ಮಾಡಿದ್ದಾನೆ. ಕಳೆದ ಮೂರು ವರ್ಷದ ಹಿಂದೆ ಜಾನ್ಸಿ ಯನ್ನು ಪ್ರೀತಿಸಿ ಮದುವೆಯಾಗಿದ್ದ ಮೃತ ಅಂಥೋಣಿರಾಜ್  ಕೊನೆಗೂ ಮಾವನಿಂದಲೇ ಹತ್ಯೆಯಾಗಿದ್ದಾನೆ.

ಪ್ರತಿದಿನ ಕುಡಿದು ಬಂದು ಹೆಂಡತಿಗೆ ಕಿರುಕುಳ ಕೊಡುತ್ತಿದ್ದ ಅಂಥೋಣಿರಾಜ್‌ನ  ಕಿರುಕುಳ ತಾಳಲಾರದೆ ಮಗಳು ಜಾನ್ಸಿ ತಂದೆ ಮನೆ ಸೇರಿಕೊಂಡಿದ್ದಳು.  ಅಂಥೋಣಿರಾಜ್ ಸಂಜೆ ಕುಡಿದು ಹೆಂಡತಿ ಮನೆಗೆ ಹೋಗಿ ಗಲಾಟೆ ಮಾಡಿ ಮಲಗಿದ್ದಾನೆ
ವಿಷಯ ತಿಳಿದು ಮನೆಗೆ ಬಂದ ಜೂಲಿಯನ್ ರಾಜು ಅಳಿಯ ಅಂಥೋಣಿರಾಜ್ ನ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಪೊಲಿಸರಿಗೆ ಶರಣಾಗಿದ್ದಾನೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sneha Gowda

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

12 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

38 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

56 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago