ಚಾಮರಾಜನಗರ

ಚಾಮರಾಜನಗರ : ಕಾಡಾನೆ ದಾಳಿಗೆ ವ್ಯಕ್ತಿಯ ಕಾಲು ಮುರಿತ

ಚಾಮರಾಜನಗರ: ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರ ಕಾಲು ಮುರಿದಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಚಂಗಡಿಯಿಂದ ಕೌದಳ್ಳಿ ಗ್ರಾಮದ ಬಳಿ ನಡೆದಿದೆ.

ಮುನಿವೆಂಕಟೇಗೌಡ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿದವರಾಗಿದ್ದು, ಗಾಯಗೊಂಡ ಅವರನ್ನು ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮುನಿವೆಂಕಟೇಗೌಡ ಅವರು ಮಲೆ ಮಹದೇಶ್ವರ ವನ್ಯಧಾಮದ ವ್ಯಾಪ್ತಿಯಲ್ಲಿರುವ ಚಂಗಡಿ ಗ್ರಾಮದಿಂದ ಕೌದಳ್ಳಿಯಲ್ಲಿ ನಡೆಯುವ ಸಂತೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಾಡಿನ ದಾರಿಯಲ್ಲಿ ಕಾಡಾನೆಯೊಂದು ದಾಳಿ ಮಾಡಿದ್ದು, ಪರಿಣಾಮ ಮುನಿವೆಂಕಟೇಗೌಡರವರ ಬಲಕಾಲು ಮುರಿದಿದೆ.

ಸೊಂಟದ ಭಾಗಕ್ಕೂ ಗಾಯವಾಗಿದೆ. ಕೂಡಲೇ  ಅವರನ್ನು ಕೊಳ್ಳೇಗಾಲದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ಆಗಾಗ್ಗೆ ನಡೆಯುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಬೇಕಾಗಿದೆ.

Sneha Gowda

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

16 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

39 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

55 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago