ಚಾಮರಾಜನಗರ: ಗುಡ್ಡ ಗಣಿ ಕುಸಿತ ಓರ್ವನ ಶವ ಹೊರಕ್ಕೆ ತೆಗೆದ ಎನ್‍ಡಿಆರ್‌ಎಫ್ ಪಡೆ

ಚಾಮರಾಜನಗರ: ಗುಡ್ಡ ಗಣಿ ಕುಸಿತ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಎನ್‍ಡಿಆರ್‌ಎಫ್ ಪಡೆಗಳು ಈವರೆಗೂ ಒಬ್ಬರ ಶವ ಹೊರ ತೆಗೆದಿದೆ.

ಬೃಹತ್ ಕಲ್ಲುಗಳ ಅಡಿ ಇನ್ನೂ ಇಬ್ಬರು ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಮುಂದುವರಿಸಿದೆ.

ಗಣಿ ಗುತ್ತಿಗೆ ಪಡೆದಿದ್ದ ಮಹೇಂದ್ರಪ್ಪ, ಉಪಗುತ್ತಿಗೆ ಪಡೆದಿದ್ದ ಹಕೀಂ, ಗಣಿ ನೋಡಿಕೊಳ್ಳುತ್ತಿದ್ದ ನವೀದ್ ವಿರುದ್ಧ ಗಣಿ, ಭೂ ವಿಜ್ಞಾನ ಇಲಾಖೆ ದೂರು ದಾಖಲಿಸಿದೆ. ಮೂವರ ಪೈಕಿ ನವೀದ್‍ನನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಸಿದ್ದಾರೆ.

ಇನ್ನೂ ಘಟನಾ ಸ್ಥಳಕ್ಕೆ ವಿ.ಸೋಮಣ್ಣ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

1 ಎಕರೆ ಭೂಮಿಯಲ್ಲಿ ಕ್ವಾರಿ ನಡೆಸಲು ಅನುಮತಿ ಪಡೆದು 4 ಎಕರೆಯಲ್ಲಿ ಗಣಿಗಾರಿಕೆ ನಡೆಸುತ್ತಿದ್ದಾರೆಂದು ಕರ್ನಾಟಕ ರಾಜ್ಯ ರೈತ ಸಂಘ ಆರೋಪಿಸಿದ್ದು, ಈ ಸಂಬಂಧ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದು ಸೋಮಣ್ಣ ತಿಳಿಸಿದ್ದಾರೆ.

Swathi MG

Recent Posts

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

20 mins ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

38 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

52 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

2 hours ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

3 hours ago