ಚಾಮರಾಜನಗರ ಜಿಲ್ಲೆಯ ಕಾದಾಟದಲ್ಲಿ ಗಂಡು ಹುಲಿ ಸಾವು

ಚಾಮರಾಜನಗರ : ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ, ಗುಂಡ್ಲುಪೇಟೆ ಉಪ ವಿಭಾಗದ, ಓಂಕಾರ ವನ್ಯಜೀವಿ ವಲಯದ ಕುರುಬರಹುಂಡಿ ಶಾಖೆ-2, ಬರಗಿ ಗಸ್ತಿನ  ಆರದೇವನಕಟ್ಟೆ ಅರಣ್ಯ ಪ್ರದೇಶದ ಬಳಿ  ಹುಲಿಗಳ ಕಾದಾಟದಲ್ಲಿ ಗಂಡು ಹುಲಿ ಸಾವನ್ನಪ್ಪಿದ ಘಟನೆ ನಡೆದಿದೆ.

ಏಳು ವರ್ಷ ವಯಸ್ಸಿನ ಗಂಡು ಹುಲಿಯೊಂದು ಇನ್ನೊಂದು ಹುಲಿಯ ಜೊತೆ ಕಾದಾಟ ನಡೆಸಿ ಮೃತಪಟ್ಟಿರುವುದು ಸಿಬ್ಬಂದಿಗಳಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ  ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಹಾಗೂ ಅರಣ್ಯಾಧಿಕಾರಿ ಡಾ. ಪಿ.ರಮೇಶ್‌ಕುಮಾರ್, ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯಾಧಿಕಾರಿ  ಕೆ. ಪರಮೇಶ್ ಇಲಾಖಾ ಪಶುವೈದ್ಯಾಧಿಕಾರಿ ಡಾ. ವಾಸೀಂ ಮಿರ್ಜಾ, ವನ್ಯಜೀವಿ ಪರಿಪಾಲಕ ಎಂ.ಕೆ. ನಂಜುಂಡೇರಾಜೇಅರಸ್,  ಸರ್ಕಾರೇತರ ಪ್ರತಿನಿಧಿ ಆರ್. ರಘುರಾಮ್, ಬರಗಿ ಗ್ರಾಮ ಪಂಚಾಯ್ತಿ ಸದಸ್ಯ ಸೂರ್ಯಪ್ರಕಾಶರವರುಗಳ ಸಮಾಕ್ಷಮ ವೀಕ್ಷಿಸಿದ ಬಳಿಕ, ಇಲಾಖಾ ಪಶುವೈದ್ಯಾಧಿಕಾರಿಗಳಾದ ಡಾ.ವಾಸೀಂ ಮಿರ್ಜಾ ರವರಿಂದ ಮೃತ ಹುಲಿಯ ಮೃತ ದೇಹವನ್ನು ಮರಣೋತ್ತರ ಶವಪರೀಕ್ಷೆ ನಡೆಸಿ ಬಳಿಕ ಭಾರತೀಯ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಯ ಪ್ರಕಾರ ಮೃತ ಹುಲಿಯ ದೇಹವನ್ನು ದಹಿಸಲಾಯಿತು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago