ಚಾಮರಾಜನಗರ: ಚಾಮರಾಜನಗರ ಗುಂಡ್ಲುಪೇಟೆ ರಸ್ತೆಯಲ್ಲಿರುವ ನಗರದ ಹೊರವಲಯದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಹಿಂಭಾಗದ ಗಾಳಿಪುರ ಬಡಾವಣೆಯಲ್ಲಿ ಮರದ ವ್ಯಾಪಾರಿಯೊಬ್ಬ ಶವವಾಗಿ ಪತ್ತೆಯಾಗಿದ್ದಾನೆ.
ಮೃತ ವ್ಯಕ್ತಿಯನ್ನು ಜಕಾವುಲ್ಲ ಎಂದು ಗುರುತಿಸಲಾಗಿದೆ. ಈತ ಗುಂಡ್ಲುಪೇಟೆ ರಸ್ತೆಯಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ಹಿಂಭಾಗದ ಗಾಳಿಪುರ ಬಡಾವಣೆಯಲ್ಲಿ ಮರದ ವ್ಯಾಪಾರ ನಡೆಸಿಕೊಂಡಿದ್ದನು ಎಂದು ತಿಳಿದು ಬಂದಿದೆ. ಇದೀಗ ಈತನ ಶವ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆಕಸ್ಮಿಕ ಸಾವಾಗಿರಬಹುದೇ ಎಂಬ ಸಂಶಯ ವ್ಯಕ್ತವಾಗಿದೆ. ಪೊಲೀಸರ ತನಿಖೆಯಿಂದಷ್ಟೆ ಗೊತ್ತಾಗಬೇಕಾಗಿದೆ.
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್, ಡಿವೈಎಸ್ ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಬಿ.ಪಿ. ಪುಟ್ಟಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.