ಚಾಮರಾಜನಗರ: ವಿಪತ್ತು ಕಾರ್ಯಾಚರಣೆ ಅಣಕು ಪ್ರದರ್ಶನ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅಗ್ನಿಶಾಮಕದಳ, ರೆಡ್ ಕ್ರಾಸ್ ಸೊಸೈಟಿ, ಗೃಹರಕ್ಷಕ ದಳ ಸಹಯೋಗದೊಂದಿಗೆ ಕೊಳ್ಳೇಗಾಲ ತಾಲೂಕಿನ  ದಾಸನಪುರದ ಕಾವೇರಿ ನದಿ ದಂಡೆಯಲ್ಲಿ ಶನಿವಾರ ಪ್ರವಾಹ ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಜನರ ರಕ್ಷಣೆಗಾಗಿ ನಡೆಸಲಾಗುವ ಕಾರ್ಯಾಚರಣೆಯ ಅಣಕು ಪ್ರದರ್ಶನ ನಡೆಸಿದರು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯಿತ್ರಿ ಅವರ ಸಮ್ಮುಖದಲ್ಲಿ ಅಗ್ನಿಶಾಮಕದಳ, ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೆಡ್‌ಕ್ರಾಸ್ ಸೊಸೈಟಿ, ಅಧಿಕಾರಿ ಸಿಬ್ಬಂದಿ ಪ್ರವಾಹ ಸಂದರ್ಭದಲ್ಲಿ ಎದುರಾಗುವ ವಿಪತ್ತು, ಅಪಾಯಕ್ಕೆ ಸಿಲುಕಿದವರ ರಕ್ಷಣೆ  ಮಾಡುವ ಕಾರ್ಯಾಚರಣೆಯ ಅಣಕು ಪ್ರದರ್ಶನವನ್ನು ಯಶಸ್ವಿಯಾಗಿ ನಿರ್ವಹಿಸಿದರು.

ಜಾನುವಾರು ಮೇಯಿಸಲು, ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ತುರ್ತು ಪ್ರವಾಹದಿಂದ ನದಿಯಲ್ಲಿ ಸಿಲುಕಿಕೊಂಡ ವೇಳೆ ಸಹಾಯಕ್ಕಾಗಿ ಕೋರುವವರ ರಕ್ಷಣೆಗಾಗಿ  ಧಾವಿಸಿ ಕಾರ್ಯಾಚರಣೆ ನಡೆಸುವ ಕುರಿತು ನಡೆದ ಪ್ರಾತ್ಯಕ್ಷಿಕೆ ಪ್ರದರ್ಶನ ವಿಶೇಷವಾಗಿ ಎಲ್ಲರ ಗಮನಸೆಳೆಯಿತು.  ಪ್ರವಾಹದಲ್ಲಿ ನದಿಗೆ ವ್ಯಕ್ತಿಯೋರ್ವ ಕೊಚ್ಚಿಕೊಂಡು ಮುಳುಗುತ್ತಿರುವ ಸಮಯದಲ್ಲಿ ಅಗ್ನಿಶಾಮಕ ಸಿಬ್ಬಂದಿ ಒ.ಬಿ.ಎಂ ದೋಣಿಯಲ್ಲಿ ರಕ್ಷಣೆ ಮಾಡುವ ಕಾರ್ಯಾಚರಣೆ ಎಲ್ಲರನ್ನು ಚಕಿತಗೊಳಿಸಿತು. ನದಿಯಲ್ಲಿ ಅಪಾಯಕ್ಕೆ ಸಿಲುಕಿ ನೀರು ಕುಡಿದು ಅರೆ ಪ್ರಜ್ಞಾವಸ್ಥೆಯಲ್ಲಿರುವ ವ್ಯಕ್ತಿಗೆ ನೀಡಲಾಗುವ ಪ್ರಥಮ ಚಿಕಿತ್ಸೆ ಹಾಗೂ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಕರೆದೊಯ್ಯುವ ಕುರಿತ ಅಣಕು ಪ್ರದರ್ಶನ ನೈಜವಾಗಿ ಮೂಡಿಬಂದಿತು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ನವೀನ್ ಕುಮಾರ್, ರೆಡ್‌ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಡಾ. ಮಹೇಶ್ ಅವರು ಜೀವರಕ್ಷಕ ಕವಚ ಧರಿಸಿ ದೋಣಿಯಲ್ಲಿ ಕುಳಿತು ಅಣಕು  ಕಾರ್ಯಾಚರಣೆ ವೀಕ್ಷಿಸಿದರು.

ಇದೇ ವೇಳೆ ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ಬಳಸಲಾಗುವ ಸಾಮಗ್ರಿಗಳು, ಕೌಶಲ ಉಪಕರಣಗಳ ಪ್ರದರ್ಶನ, ಅದರ ಉಪಯೋಗ ಕುರಿತು ತಿಳಿವಳಿಕೆ ನೀಡಲಾಯಿತು.

Ashika S

Recent Posts

ಧರ್ಮ ಪಾಲನೆಯ ಅಸಡ್ಡೆಯೇ ಸಂಘರ್ಷಕ್ಕೆ ಕಾರಣ: ಪಿ.ಎ. ಹನೀಫ್

ಆಯಾ ಧರ್ಮಗಳು ಸಾರಿದ ತತ್ವ ಆದರ್ಶಗಳ ಪಾಲನೆ ಬಗೆಗಿನ ಜನರ ಅಸಡ್ಡೆಯೇ ಇಂದಿನ ಮನುಷ್ಯ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಸತ್ಯ,…

10 mins ago

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಚಿತ್ರದ ಶೀರ್ಷಿಕೆ ಅನಾವರಣ

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಶೀರ್ಷಿಕೆ ಅನಾವರಣ

13 mins ago

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.

32 mins ago

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

48 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

58 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

1 hour ago