ಜಾತ್ಯಾತೀತ ಜನತಾದಳ ರೈತರ ಪರವಾಗಿ ಇರುವ ಪಕ್ಷ

ಚಾಮರಾಜನಗರ: ರಾಜ್ಯದಲ್ಲಿ ಜಾತ್ಯಾತೀತ ಜನತಾದಳ ಪಕ್ಷ ಯಾವಾಗಲೂ ರೈತರ ಪರವಾಗಿ ಇರುತ್ತದೆ. ಎಂಬುದಕ್ಕೆ  ಕರ್ನಾಟಕ ಇತಿಹಾಸದಲ್ಲಿಯೇ ಯಾವುದೇ ಸರ್ಕಾರ ಮಾಡದ ಕೆಲಸವನ್ನು ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆದ ತಕ್ಷಣ ರೈತರ ಸಾಲ ಮನ್ನಾ ಮಾಡಿರುವುದೇ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ತಿಳಿಸಿದರು.

ಕೊಳ್ಳೇಗಾಲ ಮತ್ತು ಹನೂರು ಕ್ಷೇತ್ರದಲ್ಲಿ ಜನತಾ ಜಲಧಾರೆಯ ಬೃಹತ್ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು  ಕುಮಾರಣ್ಣನವರು ಸಹಕಾರ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡಿ. ಗ್ರಾಮ ವಾಸ್ತವ್ಯಮಾಡಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ದೇವೇಗೌಡರು ರಾಜ್ಯದ ನೀರಾವರಿ ಯೋಜನೆಗಳಿಗೆ ಪ್ರಧಾನಮಂತ್ರಿಗಳಾಗಿದ್ದಾಗ ಹಾಗು ಮುಖ್ಯಮಂತ್ರಿಯಾಗಿದ್ದಾಗ ಸಾವಿರಾರು ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಅಭಿವೃದ್ಧಿ ಪಡಿಸಿದ್ದಾರೆ ಆದ್ದರಿಂದ ಈ ಭಾರಿ ಪ್ರತಿಯೊಬ್ಬ ರೈತರು ಜೆ.ಡಿ.ಎಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಟಿ.ನರಸೀಪುರ ಕ್ಷೇತ್ರದ ಶಾಸಕ ಅಶ್ವಿನ್‌ಕುಮಾರ್ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಜೀವನದೊಂದಿಗೆ  ಚೆಲ್ಲಾಟವಾಡುತ್ತಿದ್ದು, ಪ್ರತಿನಿತ್ಯ ಬಳಸುವ ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆಗಳನ್ನು ಹೆಚ್ಚಿಸುತ್ತ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಇವೆಲ್ಲದ್ದರಿಂದ ಮುಕ್ತಿ ಪಡೆಯಬೇಕಾದರೆ ಪ್ರಾದೇಶಿಕ ಪಕ್ಷದ ಅವಶ್ಯಕತೆ ಇದ್ದು ಈ ಬಾರಿ ಜೆ.ಡಿ.ಎಸ್ ಪಕ್ಷನ್ನು ಬೆಂಬಲಿಸಿ ಮತ್ತೊಮ್ಮೆ ಕುಮಾರಿಸ್ವಾಮಿಯವರು ಮುಖ್ಯಮಂತ್ರಿಯಾಗಲು ಸಹಕರಿಸಿ ಎಂದ ಅವರು ಹನೂರು ಕ್ಷೇತ್ರದಲ್ಲಿ ಮಂಜುನಾಥ್‌ರವರು ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋತಿದ್ದಾರೆ. ಈ ಬಾರಿ ಅವರನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಚಾಮರಾಜನಗರ ಜಿಲ್ಲಾ ಜೆ.ಡಿ.ಎಸ್ ಅಧ್ಯಕ್ಷ ಮಂಜುನಾಥ್ ಮಾತನಾಡಿ ಹನೂರು ಕ್ಷೇತ್ರದಲ್ಲಿ ಈ ಬಾರಿ ನನಗೆ ಉತ್ತಮ  ಬೆಂಬಲ ಸಿಗುತ್ತಿದೆ. ನಾನು ಸೋತಿದ್ದರು ಕಳೆದ ನಾಲ್ಕು ವರ್ಷಗಳಿಂದ ಜನರ ಸಂಪರ್ಕದಲ್ಲಿದ್ದು ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇನೆ. ಈ ಬಾರಿ ಜೆ.ಡಿ.ಎಸ್ ಸರ್ಕಾರ ರಾಜ್ಯದಲ್ಲಿ ಬರುವ ಲಕ್ಷಣಗಳಿದ್ದು ಕುಮಾರಣ್ಣ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ ಎಂದು ಮನವಿ ಮಾಡಿದರು.

Sneha Gowda

Recent Posts

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

3 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

8 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

23 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

29 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

40 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

50 mins ago