ದನದ ಮಾಂಸ ಮಾರುತ್ತಿದ್ದ ಮೂವರ ಬಂಧನ

ಪಿರಿಯಾಪಟ್ಟಣ: ದನದ ಮಾಂಸ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಟ್ಟದಪುರ ಪೊಲೀಸರು ಬಂಧಿಸಿ, ಮೂವತ್ತೆಂಟು ಕೆಜಿ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

ಮುನೀಬ್ ಖಾನ್, ವಾಸಿಂ ಪಾಷ, ಭಾಷಾ ಅಹ್ಮದ್ ಬಂಧಿತರಾಗಿದ್ದಾರೆ. ಇವರು ತಾಲ್ಲೂಕಿನ ಬೆಟ್ಟದಪುರ ಸಮೀಪದ ಹಲಗನಹಳ್ಳಿ ಗ್ರಾಮದ ಜಮೀನಿನೊಂದರಲ್ಲಿ  ದನವನ್ನು ಕೊಂದು ಮಾಂಸ ಮಾಡಿ ಅದನ್ನು ಮಾರಾಟ ಮಾಡುತ್ತಿದ್ದರು.

ಈ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನಲೆಯಲ್ಲಿ ಬೆಟ್ಟದಪುರ ಆರಕ್ಷಕ ಠಾಣೆ ಸಬ್ ಇನ್ಸ್ ಪೆಕ್ಟರ್ ಪ್ರಕಾಶ್ ಎಂ ಎತ್ತಿನಮನಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಈ ವೇಳೆ ಆರೋಪಿಗಳಾದ ಮುನೀಬ್ ಖಾನ್, ವಾಸಿಂ ಪಾಷ, ಭಾಷಾ ಅಹ್ಮದ್ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳಿಂದ ಸುಮಾರು 38 ಕೆ.ಜಿ 300  ಗ್ರಾಂ ತೂಕದ ದನದ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ,

ಕಾರ್ಯಾಚರಣೆಯಲ್ಲಿ ಬೆಟ್ಟದಪುರ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪ್ರಕಾಶ್ ಎಂ ಎತ್ತಿನಮನಿ ಸಿಬ್ಬಂದಿಗಳಾದ ಮಂಜುನಾಥ್, ದಿಲೀಪ್, ಮಧು, ರಮೇಶ್, ಅಶೋಕ್ ಭಾಗವಹಿಸಿದ್ದರು.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago