ಚಾಮರಾಜನಗರ

ದೊಡ್ಡಬೇಲಾಳಲ್ಲಿ ಆತಂಕ ಸೃಷ್ಟಿಸಿದ ಚಿರತೆ

ಪಿರಿಯಾಪಟ್ಟಣ:ತಾಲೂಕಿನ ದೊಡ್ಡಬೇಲಾಳು ಗ್ರಾಮ ಸಮೀಪವಿರುವ ಅದಾನಿ ಗ್ರೀನ್ ಎನರ್ಜಿ ಸೋಲಾರ್ ಪವರ್      ಪ್ಲಾಂಟ್ ಆವರಣದಲ್ಲಿ ಚಿರತೆಗಳು ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಭಯದ ವಾತಾವರಣ ಮೂಡಿದೆ.

ಸೋಲಾರ್ ಪ್ಲಾಂಟ್ ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಪ್ಲಾಂಟ್ ನ ಮುಖ್ಯದ್ವಾರದ ಬಳಿಯೇ ಚಿರತೆಗಳ ಓಡಾಟ ಕಂಡ ಪ್ಲಾಂಟ್ ಭದ್ರತಾ ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣ ಅರಣ್ಯ ಇಲಾಖೆ  ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ,  ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಪ್ಲಾಂಟ್ ಆವರಣದ ಸುತ್ತಮುತ್ತ ಹುಡುಕಾಟ ನಡೆಸಿದರೂ ಚಿರತೆಗಳು ಪತ್ತೆಯಾಗಲಿಲ್ಲ. ಸೋಲಾರ್  ಪವರ್ ಪ್ಲಾಂಟ್ ಆವರಣದ ಸುತ್ತ  ಅಳವಡಿಸಿರುವ ಮುಳ್ಳು ತಂತಿ ಬೇಲಿಯಿಂದ ಚಿರತೆಗಳು ಹೊರಹೋಗುವುದು ಸಾಧ್ಯವಿಲ್ಲದ ಹಿನ್ನೆಲೆ ಸೋಲಾರ್ ಪ್ಲಾಂಟ್  ನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಎಚ್ಚರಿಕೆಯಿಂದಿದ್ದು ಆವರಣದಲ್ಲಿ ಓಡಾಡದಂತೆ ಸೂಚಿಸಿ ಪ್ಲಾಂಟ್ ಮುಖ್ಯ ಪ್ರವೇಶ ದ್ವಾರವನ್ನು ತೆರೆದಿಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

ಪ್ಲಾಂಟ್ ನ ಭದ್ರತಾ ಮುಖ್ಯಸ್ಥ ಬಿ.ಸಿ.ತಮ್ಮಣ್ಣೆಗೌಡ ಅವರು ಮಾತನಾಡಿ ಈ ಹಿಂದೆಯೂ ಸಹ ಪ್ಲಾಂಟ್ ಆವರಣದಲ್ಲಿ ಚಿರತೆಗಳ ಓಡಾಟ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದೇವೆ, ಚಿರತೆಗಳು ಪ್ರತ್ಯಕ್ಷವಾಗಿರುವುದರಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದ್ದು ಶೀಘ್ರ ಅರಣ್ಯ ಇಲಾಖೆಯವರು ಚಿರತೆಗಳನ್ನು ಬಂಧಿಸಿ ಅರಣ್ಯಕ್ಕೆ ಅಟ್ಟುವಂತೆ ಕೋರಿದ್ದಾರೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

52 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago